Bangalore | ಲೂಟಿ ಹೊಡೆಯೋದೇ ದೇಶಪ್ರೇಮವಾ ಮಿಸ್ಟರ್ ಸಿದ್ದರಾಮಯ್ಯ?
ಬೆಂಗಳೂರು : ಅಂದು ದೇಶ ಉಳಿಸಿದ ಕಾಂಗ್ರೆಸ್ ಬೇರೆ, ಈಗ ದೇಶವನ್ನು ಲೂಟಿ ಹೊಡೆಯುತ್ತಿರುವ ಕಾಂಗ್ರೆಸ್ಸೇ ಬೇರೆ. ಲೂಟಿ ಹೊಡೆಯೋದೇ ದೇಶಪ್ರೇಮವಾ ಮಿಸ್ಟರ್ ಸಿದ್ದರಾಮಯ್ಯ? ನಿಮ್ಮ 5 ವರ್ಷದ ಆಡಳಿತದಲ್ಲಿ ನಿಮ್ಮ ಸುತ್ತಮುತ್ತಲಿನ ಪಟಾಲಂ ಹೊಡೆದ ಕೊಳ್ಳೆಯ ಲೆಕ್ಕ ಕೊಡಲೇ? ಅರ್ಕಾವತಿ ರೀಡು ಹಗರಣ ತೆಗೆದರೆ ಮುಖ ಎಲ್ಲಿಟ್ಟುಕೊಳ್ಳುತ್ತೀರಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್ ನಲ್ಲಿ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದು, ಗಾಂಧಿ ಹೆಸರೇಳಿಕೊಂಡು ಮತ್ತೆ ಅಧಿಕಾರಕ್ಕೆ ಬರಲು ಹೊಂಚು ಹಾಕುತ್ತಿದ್ದೀರಿ. ಇನ್ನೆಷ್ಟು ತಲೆಮಾರಿಗೆ ಆಗುವಷ್ಟು ಲೂಟಿ ಹೊಡೆಯಬೇಕು ಮಿಸ್ಟರ್ ಸಿದ್ದರಾಮಯ್ಯ? ಅಧಿಕಾರಕ್ಕಾಗಿ ಸ್ವಾತಂತ್ರ್ಯ ಹೋರಾಟದ ಜಪವೇ? ನೇರವಾಗಿ ಕುರ್ಚಿ ಜಪವನ್ನೇ ಮಾಡಬಹುದಲ್ಲವೇ?
ಜೆಡಿಎಸ್ ಇನ್ನೊಂದು ಪಕ್ಷದ ಬಳಿ ಬೆಂಕಿ ಕಾಯಿಸಿಕೊಳ್ಳುವ ಪಕ್ಷ ಎನ್ನುತ್ತೀರಿ. ಆದರೆ, ನಿಮ್ಮನ್ನು ನಂಬಿದ್ದಕ್ಕೆ ನಮ್ಮ ಪಕ್ಷಕ್ಕೆ ನೀವೇ ಬೆಂಕಿ ಹಾಕಿದ್ದು ಮರೆತಿರಾ? ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡು ಆಪ್ತರನ್ನೆಲ್ಲ ಮುಂಬಯಿಗೆ ಸಾಗಹಾಕಿದ ಕತ್ತಲ ಕಿತಾಪತಿ ಮಾಡಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.
ಇಷ್ಟಕ್ಕೂ ತಾವೇನೂ ಮೂಲ ಕಾಂಗ್ರೆಸ್ಸಿಗರಲ್ಲ. ವಲಸೆ ಹೋಗಿ, ವಿಷಹುಳವಾಗಿ ಅಲ್ಲಿಗೆ ಕರೆದುಕೊಂಡು ಹೋದವರ ಕೈ ಕಚ್ಚಿದ್ದು, ಆಮೇಲೆ ನಿಮ್ಮಿಂದ ಆ ಪಕ್ಷ ಬಿಟ್ಟುಹೋದವರ ಪಟ್ಟಿ ಹನುಮನ ಬಾಲದಂತೆ ಬೆಳೆದದ್ದು ಗೊತ್ತಿಲ್ಲವೆ? ಆಶ್ರಯ ಕೊಟ್ಟ ಮನೆಯಲ್ಲೇ ಗಳ ಇರಿದವರು ಯಾರು? 11/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2022
ಇಷ್ಟಕ್ಕೂ ತಾವೇನೂ ಮೂಲ ಕಾಂಗ್ರೆಸ್ಸಿಗರಲ್ಲ. ವಲಸೆ ಹೋಗಿ, ವಿಷಹುಳವಾಗಿ ಅಲ್ಲಿಗೆ ಕರೆದುಕೊಂಡು ಹೋದವರ ಕೈ ಕಚ್ಚಿದ್ದು, ಆಮೇಲೆ ನಿಮ್ಮಿಂದ ಆ ಪಕ್ಷ ಬಿಟ್ಟುಹೋದವರ ಪಟ್ಟಿ ಹನುಮನ ಬಾಲದಂತೆ ಬೆಳೆದದ್ದು ಗೊತ್ತಿಲ್ಲವೆ? ಆಶ್ರಯ ಕೊಟ್ಟ ಮನೆಯಲ್ಲೇ ಗಳ ಇರಿದವರು ಯಾರು?
ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನೀವು ನಡೆಸುತ್ತಿರುವ ಷಡ್ಯಂತ್ರ ಇನ್ನೂ ನಿಂತಿಲ್ಲ, ಇನ್ನೊಬ್ಬರನ್ನು ಸೈಡಿಗೆ ತಳ್ಳಿ ಆಗಲೇ ಸಿಎಂ ಕುರ್ಚಿ ಮೇಲೆ ಟವೆಲ್ ಹಾಕಿದ್ದೀರಲ್ಲ ಮಿಸ್ಟರ್ ಸಿದ್ದರಾಮಯ್ಯ? ಇದು ಸ್ವಾತಂತ್ರ್ಯ ಸಂಗ್ರಾಮವೋ ಅಥವಾ ಕರ್ಚಿಗಾಗಿ ಹೋರಾಟವೋ ಎಂದು ಕುಟುಕಿದ್ದಾರೆ.

ನಿಮ್ಮಂತಹ ರಾಜಕೀಯ ಭಸ್ಮಾಸುರರು ಇರುವ ಕಾಂಗ್ರೆಸ್ ಪಕ್ಷದ ಹತ್ತಿರಕ್ಕೆ ಬಂದವರೆಲ್ಲ ಸುಟ್ಟು ಭಸ್ಮವಾಗಿದ್ದಾರೆ. ನಮ್ಮ ಪಕ್ಷ ಇರಲಿ, ಪಕ್ಕದ ಮಹಾರಾಷ್ಟ್ರದಲ್ಲಿ ಶಿವಸೇನೆ ಗತಿ ಏನಾಯಿತು? ಯುಪಿಎ-1 ಸರಕಾರಕ್ಕೆ ಬೆಂಬಲ ಕೊಟ್ಟ ತಪ್ಪಿಗೆ 65 ಕ್ಷೇತ್ರ ಗೆದ್ದಿದ್ದ ಕಮ್ಯುನಿಸ್ಟರು ಈಗೆಲ್ಲಿದ್ದಾರೆ? ನಿಮ್ಮ ಸಹವಾಸ ಮಾಡಿದವರಿಗೆಲ್ಲ ಇದೇ ಗತಿ!
ಅಧಿಕಾರದ ದುರಾಸೆಗೆ ಅನ್ಯಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ. 14/14
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2022
ಅಧಿಕಾರದ ದುರಾಸೆಗೆ ಅನ್ಯಪಕ್ಷಗಳನ್ನು ನಂಬಿಸಿ ಕತ್ತು ಕುಯ್ಯವ ಕಾಂಗ್ರೆಸ್ ಪಕ್ಷ ಎಸಗಿದ ಪಾಪಕ್ಕೆ ಈಗ ಫಲ ಉಣ್ಣುತ್ತಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸೋಗಲಾಡಿ ಸಿದ್ದರಾಮಾಯಣ ಶುರುವಾಗಿದೆ. ಈ ಸೋಗಲಾಡಿ ಸಿದ್ದಯ್ಯನ ಅಸಲಿಯೆತ್ತು ಏನು ಎಂಬುದು ಜನರಿಗೆ ಚೆನ್ನಾಗಿ ಗೊತ್ತಿದೆ ಎಂದು ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.








