Bangalore | ಚಾಮರಾಜಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಬೆಂಗಳೂರು : ಇಂದು ಚಾಮರಾಜಪೇಟೆ ಬಂದ್ ಹಿನ್ನೆಲೆ ಚಾಮರಾಜಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಅನುಮತಿ ಇಲ್ಲದಿದ್ದರೂ ಬಂದ್ ಗೆ ಕರೆ ಕೊಡಲಾಗಿದೆ.
ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ 600ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ಬಂದೋಬಸ್ತ್ ಏರ್ಪಾಟು ಮಾಡಿಕೊಳ್ಳಲಾಗಿದೆ.
ಚಾಮರಾಜಪೇಟೆಯಾದ್ಯಂತ 2 ಡಿಸಿಪಿ, 10 ಎಸಿಪಿ, 20 ಇನ್ಸ್ಪೆಕ್ಟರ್, 120 ಪಿಎಸ್ಐ, 500ಕ್ಕೂ ಹೆಚ್ಚು ಜನ ಪೊಲೀಸ್ ಕಾನ್ಸ್ಟೇಬಲ್ ಗಳನ್ನು ನಿಯೋಜನೆ ಮಾಡಲಾಗಿದೆ.
ಬಂದ್ ಗೆ ಪೊಲೀಸ್ ಠಾಣೆಯಿಂದ ಯಾವುದೇ ಅನುಮತಿ ನೀಡಿಲ್ಲ.
ಆದ್ರೂ ನಾಗರೀಕ ಹಿತರಕ್ಷಣಾ ವೇದಿಕೆಯಿಂದ ಬಂದ್ ಗೆ ಕರೆ ಕೊಡಲಾಗಿದೆ.
ಬಲವಂತದಿಂದ ಯಾರೂ ಅಂಗಡಿ – ಮುಗ್ಗಟ್ಟು ಮುಚ್ಚಿಸುವಂತಿಲ್ಲ.
ಒಂದ್ ವೇಳೆ ಬಲವಂತವಾಗಿ ಅಂಗಡಿ ಮುಚ್ಚಿಸಿದ್ರೆ ಅವರಿಗೆ ಪೊಲೀಸ್ ಬಿಸಿ ತಟ್ಟಲಿದೆ.