ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ (ಬಿಐಇಸಿ) ಕೇಂದ್ರ ಇನ್ನು ಮುಂದೆ ಕೋವಿಡ್ ಆಸ್ಪತ್ರೆ
ಬೆಂಗಳೂರು, ಜುಲೈ 2: ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ (ಬಿಐಇಸಿ) ಕೇಂದ್ರವನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೊರೊನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಕಾರಣ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ರೋಗಿಗಳು ಪರದಾಡುವಂತಾಗಿದೆ. ಅಷ್ಟೇ ಅಲ್ಲ ಅಂಬ್ಯುಲೆನ್ಸ್ ನಲ್ಲೇ ರೋಗಿಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಪ್ರಸ್ತುತ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸರ್ಕಾರ ನೆಲಮಂಗಲ ಸಮೀಪದ ಮಾದವಾರ ಬಳಿ ಇರುವ ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ (ಬಿಐಇಸಿ) ಕೇಂದ್ರದಲ್ಲಿ ಕೊರೊನಾ ಸೆಂಟರ್ ತೆರೆಯಲು ನಿರ್ಧರಿಸಿದೆ.
ಈಗಾಗಲೇ ಬಿಐಇಸಿಯಲ್ಲಿರುವ ಐದು ಬೃಹತ್ ಸಭಾಂಗಣದಲ್ಲಿ ಬೆಡ್ಗಳ ವ್ಯವಸ್ಥೆ ಹಾಗೂ ಕೊಠಡಿಗಳ ನಿರ್ಮಾಣ ಕಾರ್ಯ ಬರದಿಂದ ಸಾಗುತ್ತಿದ್ದು, 7 ಸಾವಿರ ಬೆಡ್ ಗಳ ತಾತ್ಕಾಲಿಕ ಅತಿದೊಡ್ಡ ಕೋವಿಡ್ ಆಸ್ಪತ್ರೆ ನಿರ್ಮಿಸಲು ಸರ್ಕಾರ ಮುಂದಾಗಿದೆ.








