ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಪರಿಣಾಮ ಬೆಂಗಳೂರಿಗೂ ತಟ್ಟಿದೆ. ಮುಂದಿನ ಮೂರು-ನಾಲ್ಕು ದಿನಗಳವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.








