Bangalore | ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿ
ಬೆಂಗಳೂರು : ಸಿಲಿಕಾನ್ ಸಿಟಿಯ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು, ಗುಂಡಿ ತಪ್ಪಿಸಲು ಹೋಗಿ ಬಸ್ ಅಡಿಯಲ್ಲಿ ಸಿಲುಕಿ ಆಸ್ಪತ್ರೆ ಪಾಲಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಉಮಾದೇವಿ ಮೃತ ಮಹಿಳೆಯಾಗಿದ್ದಾರೆ.
ನಿನ್ನೆ ನಗರದ ಮಾಗಡಿ ರಸ್ತೆಯ ಸುಜಾತ ಥಿಯೇಟರ್ ಬಳಿ ಉಮಾದೇವಿ ಅವರು ಗುಂಡಿ ತಪ್ಪಿಸಲು ಹೋಗಿ ಕೆಎಸ್ ಆರ್ ಟಿಸಿ ಬಸ್ ನಡಿ ಸಿಲುಕಿದ್ದರು.

ಈ ವೇಳೆ ಅವರು ಗಂಭೀರವಾಗಿ ಗಾಯಗೊಂಡಿದ್ದ ಉಮಾದೇವಿ ಮತ್ತು ಅವರ ಮಗಳನ್ನು ರಾಜಾಜಿನಗರದ ಇಎಸ್ ಐ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಇನ್ನು ಈ ಪ್ರಕರಣ ಸಂಬಂಧ ಬಸ್ ಚಾಲಕ ಮಾರುತಿ ರಾವ್ ಎಂಬುವವರನ್ನ ಬಂಧಿಸಲಾಗಿದೆ.