ಬೆಂಗಳೂರು : ಕೊರೊನಾ ಸೋಂಕಿತರ ಛಾಯಾಚಿತ್ರ ಸೆರೆ ಹಿಡಿಯುತ್ತಿದ್ದವರಿಗೆ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಖಡಕ್ ವಾರ್ನಿಂಗ್ ನೀಡಿದ್ದಾರೆ
ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ ಪೋಟೋ ಕ್ಲಿಕಸುವ ಪರಿಪಾಠ ಬೆಳೆಯುತ್ತಿದೆ. ಸೋಂಕಿತರನ್ನು ಮನೆಯಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಫೋಟೋ/ವಿಡಿಯೋ ಮಾಡಲಾಗುತ್ತಿದೆ. ಇದರಿಂದಾಗಿ ನಮಗೆ ಮುಜಗರವಾಗುತ್ತದೆ ಎಂದು ಕೆಲವರು ದೂರು ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಯಾರೂ ಅನುಮತಿ ಇಲ್ಲದೇ ಕೊರೊನಾ ರೋಗಿಗಳ ಪೋಟೋ ತೆಗೆಯುವಂತಿಲ್ಲ. ಈ ನಿಯಮ ಉಲ್ಲಂಘಿಸಿದರೇ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಭಾಸ್ಕರ್ ರಾವ್ ಹೇಳಿದ್ದಾರೆ.