Bangalore | ರಸ್ತೆ ಅಪಘಾತ – ಪೊಲೀಸ್ ಸಿಬ್ಬಂದಿ ದುರ್ಮರಣ
ಬೆಂಗಳೂರು : ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಸ್ಥಳದಲ್ಲಿಯೇ ಮೂವರು ಮೃತಪಟ್ಟು ಐವರು ಗಾಯಗೊಂಡಿದ್ದಾರೆ.
ಇಂದು ಮುಂಜಾನೆ ಚಿತ್ತೂರು ಸಮೀಪ ಈ ಅಪಘಾತ ಸಂಭವಿಸಿದೆ.
ಮೃತರನ್ನು ಅನಿಲ್, ಅವಿನಾಶ್ ಹಾಗೂ ದೀಕ್ಷಿತ್ ಎಂದು ಗುರುತಿಸಲಾಗಿದೆ.

ಇವರೆಲ್ಲರೂ ಬೆಂಗಳೂರಿನ ಶಿವಾಜಿ ನಗರದ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ತನಿಖೆಯ ಸಂಬಂಧ ತೆರಳುತ್ತಿದ್ದರು.
ಈ ವೇಳೆ ದುರ್ಘಟನೆ ನಡೆದಿದೆ.
ಇನ್ನು ಅಪಘಾತದ ಸುದ್ದಿ ತಿಳಿದ ತಕ್ಷಣ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.








