ಬೆಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಸಂಸದ ಅಸಾದುದ್ದೀನ್ ಓವೈಸಿ ಅವರು ನಗರಕ್ಕೆ ಆಗಮಿಸುತ್ತಿದ್ದು, ಪ್ರಚೋದನಕಾರಿ ಭಾಷಣ ಮಾಡಿದ್ರೆ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಹೇಳಿದ್ದಾರೆ. ಇಂದು ಈಶಾನ್ಯ ವಿಭಾಗದ ಪೊಲೀಸರು ವಶಪಡಿಸಿಕೊಂಡ ಕಳವು ಮಾಲು ಪ್ರದರ್ಶನ ಮತ್ತು ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್ ಅವರು ಭಾಗವಹಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಓವೈಸಿ ಆಗಮನದ ಬಗ್ಗೆ ಮಾತನಾಡಿದ ಅವರು, ಓವೈಸಿ ಅವರಿಗೆ ಮಾತನಾಡಬೇಡಿ ಎಂದು ಹೇಳುವುದಕ್ಕೆ ಆಗುವುದಿಲ್ಲ. ವಾಕ್ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಅದರ ಜೊತೆಗೆ ವಾಕ್ ಜವಾಬ್ದಾರಿಯೂ ಇರಬೇಕು. ಒಂದು ವೇಳೆ ಅಸಾದುದ್ದೀನ್ ಅವರು ಪ್ರಚೋದನೆಕಾರಿ ಭಾಷಣ ಮಾಡಿದ್ರೆ ಖಂಡಿತ ಕ್ರಮ ಕೈಗೊಳ್ಳುತ್ತೇವೆ ಎಂದು ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.
ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ
ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...








