Bangalore | ಬೆಂಗಳೂರಿನಲ್ಲಿ ಮತ್ತೆ ಮಳೆರಾಯನ ಆರ್ಭಟ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆರಾಯನ ಕಾಟ ಶುರುವಾಗಿದೆ.
ನಿನ್ನೆ ನಗರದಲ್ಲಿ ಧೋ ಎಂದು ಅಬ್ಬರಿಸಿದ್ದ ವರುಣ ಇಂದು ಮತ್ತೆ ಆರ್ಭಟಿಸಲು ಆರಂಭಿಸಿದ್ದಾನೆ.
ನಗರದ ಬಹುತೇಕ ಎಲ್ಲಾ ಭಾಗಗಳಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ವೇಳೆ ಮಳೆ ಸುರಿಯಲಾರಂಭಿಸಿದೆ.

ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಮಂದಿ ಬರ್ಬಾದ್ ಆಗಿದ್ದು, ಜನರು ಕಂಗಾಲಾಗಿದ್ದಾರೆ.