Bangalore | 5 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಮಳೆ
ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ಮೂರು ದಿನಗಳಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ಕಳೆದ 5 ವರ್ಷಗಳ ಬಳಿಕ ದಾಖಲೆ ಮಟ್ಟದ ಮಳೆಯಾಗಿದೆ.
ಈ ಹಿಂದೆ 2017ರಲ್ಲಿ ಬೆಂಗಳೂರಿನಲ್ಲಿ 170 ಮಿ.ಮೀ ಮಳೆಯಾಗಿತ್ತು.

ಇದೀಗ 5 ವರ್ಷದ ಬಳಿಕ ಮತ್ತೆ ಮೆಟ್ರೊ ನಗರಯಲ್ಲಿ ಭಾರಿ ಮಳೆಯಾಗಿದೆ.
ಈ ವರ್ಷ ಇಲ್ಲಿವರೆಗೆ 166 ಮಿ.ಮೀ ಮಳೆಯಾಗಿದೆ.
ಅಂದಹಾಗೆ ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಎಲ್ಲೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.