ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ಮೂರು ವರ್ಷಗಳಲ್ಲಿಯೇ ಶೂನ್ಯ ಮಳೆ ದಾಖಲಾಗಿದೆ.
ಬೆಂಗಳೂರಿನಲ್ಲಿ ಫೆಬ್ರವರಿ 7.1ಮಿ.ಮೀ ಹಾಗೂ ಮಾರ್ಚ್‌ನಲ್ಲಿ 14.7ಮಿ.ಮೀ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಎರಡು ತಿಂಗಳಿನಲ್ಲಿ ಒಂದು ಹನಿಯು ಮಳೆಯಾಗಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಡಿಕೆಯ ಪ್ರಕಾರ ಏಪ್ರಿಲ್‌ನಲ್ಲಿ 61.7 ಮೀ ಮಳೆಯಾಗಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಏಪ್ರಿಲ್ ಮಧ್ಯದವರೆಗೆ ಮಳೆಯಾಗಿಲ್ಲ. ಅಲ್ಲದೇ, ಅಂತ್ಯದವರೆಗೂ ಮಳೆಯ ಸುಳಿವಿಲ್ಲ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮತ್ತೆ ಎರಡು ಡಿಗ್ರಿ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.