ಬೆಂಗಳೂರು : ಡಿಜೆ ಹಳ್ಳಿ ಗಲಭೆಯಿಂದ ಹೊತ್ತಿ ಉರಿದ ಭೈರಸಂದ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸಕ್ಕೆ ಚಾಮರಾಜಪೇಟೆಯ ಶಾಸಕ ಜಮೀತ್ ಅಹಮದ್ ನೇತೃತ್ವದಲ್ಲಿ ಮೌಲ್ವಿಗಳು ಭೇಟಿ ನೀಡಿದ್ದರು.
ಈ ವೇಳೆ ಅಲ್ಲಾ ಎಲ್ಲವನ್ನೂ ಕೊಡ್ತಾನೆ ಯಾವುದೇ ಕಾರಣಕ್ಕೂ ಚಿಂತೆ ಮಾಡಬೇಡಿ ಎಂದು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಮೌಲ್ವಿಗಳು ಧೈರ್ಯ ತುಂಬಿದ್ದಾರೆ.
ಹೊತ್ತಿ ಉರಿದ ಮನೆಯನ್ನು ಅಖಂಡ ತೋರಿಸುವ ಸಂದರ್ಭದಲ್ಲಿ ಮೌಲ್ವಿ ಇರ್ಷಾದ್ ಅಹಮ್ಮದ್, ಅಖಂಡ ಶ್ರೀನಿವಾಸ್ ನಮಗೆ ಮನೆ ಮಗ ಇದ್ದಂತೆ. ಎಲ್ಲಾ ಮಸೀದಿಗಳು ನಿಮ್ಮ ಜೊತೆ ಇರುತ್ತದೆ. ಅಲ್ಲಾ ಎಲ್ಲವನ್ನೂ ಕೊಡುತ್ತಾನೆ. ಯಾವುದೇ ಕಾರಣಕ್ಕೂ ಚಿಂತೆ ಮಾಡಬೇಡಿ ಎಂದು ಹೇಳಿ ಧೈರ್ಯ ತುಂಬಿದರು. ಅಲ್ಲದೆ ಹೊತ್ತಿ ಉರಿದಿರುವ ಮನೆಯನ್ನು ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದರು.