ಬೆಳಗಾವಿ : ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ನಡೆದದ್ದು ಕಾಂಗ್ರೆಸ್ ಗಲಾಟೆ. ಅದಕ್ಕೂ ನಮ್ಮ ಸರ್ಕಾರ ಅಥವಾ ಬಿಜೆಪಿಗೆ ಸಂಬಂಧವಿಲ್ಲ ಎಂದು ಗಲಭೆ ಬಗ್ಗೆ ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಗಲಭೆ ಬಗ್ಗೆ ಕಾಂಗ್ರೆಸ್‌ನವರು ಸತ್ಯಶೋಧನಾ ಸಮಿತಿ ರಚಿಸಿದ್ದಾರೆ. ನೋಡೋಣ ಅದೇನು ವರದಿ ಕೊಡುತ್ತಾರೋ?’ ಎಂದರು.
ಇನ್ನು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಭಾವಿತ. ಅವರಿಗೆ ಅನ್ಯಾಯ ಆಗಬಾರದು. ರಕ್ಷಣೆ ನೀಡಲು ಸರ್ಕಾರ ಬದ್ಧವಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ನಿಭಾಯಿಸುತ್ತಿದ್ದಾರೆ. ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮವಾಗಲಿದೆ’ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, ಈ ಬಗ್ಗೆ ಮಹಾರಾಷ್ಟ್ರದೊಂದಿಗೆ ಸಮನ್ವಯ ಮಾಡುತ್ತಿದ್ದೇವೆ. ಈ ಬಾರಿ ನೆರೆಯಿಂದ ಹೆಚ್ಚಿನ ಹಾನಿ ಆಗದಂತೆ ನೋಡಿಕೊಳ್ಳಲಾಗುವುದು’ ಭರವಸೆ ನೀಡಿದರು.