ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಒಪ್ಪಿದರೇ ಧರ್ಮಗುರುಗಳು ಮನೆ ಕಟ್ಟಿಸಿಕೊಡುವುದಾಗಿ ಹೇಳಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.
ಡಿಜೆ ಹಳ್ಳಿ ಗಲಭೆಯಿಂದ ಹೊತ್ತಿ ಉರಿದ ಭೈರಸಂದ್ರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ನಿವಾಸಕ್ಕೆ ಚಾಮರಾಜಪೇಟೆಯ ಶಾಸಕ ಜಮೀತ್ ಅಹಮದ್ ನೇತೃತ್ವದಲ್ಲಿ ಮೌಲ್ವಿಗಳು ಭೇಟಿ ನೀಡಿದ್ದರು. ಈ ವೇಳೆ ಮೌಲ್ವಿಗಳು ಶಾಸಕರಿಗೆ ಧೈರ್ಯ ತುಂಬಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್, ಮನೆ ಕಟ್ಟಿಸಿಕೊಡುವುದಾಗಿ ಧರ್ಮಗುರುಗಳು ಹೇಳಿದ್ದಾರೆ. ಶಾಸಕರು ಒಪ್ಪಿದರೆ ನಾವು ಸ್ವಂತ ಹಣ ದಿಂದ ಮನೆ ಕಟ್ಟಿಸಿಕೊಡೊದಾಗಿ ಹೇಳಿದ್ದಾರೆ. ಯಾರೇ ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ. ಕಾನೂನಿನ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಅಖಂಡ ಶ್ರೀನಿವಾಸ ಮೂರ್ತಿ, ಮನೆಯನ್ನು ನಾನೇ ನಿರ್ಮಿಸುತ್ತೇನೆ. ಗುರುಗಳ ಆಶೀರ್ವಾದ ಸದಾ ಇರಲಿ. ನಾವೇ ಹೋಗಿ ಮಾತನಾಡಿಕೊಂಡು ಬರಬೇಕಾಗಿತ್ತು. ಗುರುಗಳೇ ಬಂದು ಆಶೀರ್ವಾದ ಮಾಡಿದ್ದಕ್ಕೆ ಧನ್ಯವಾದಗಳು ಎಂದು ತಿಳಿಸಿದರು.








