ಚಿಕ್ಕಮಗಳೂರು : ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಗೆ ಜಮೀರ್ ಅಹ್ಮದ್ ಖಾನ್ ಅವರೇ ಆಕ್ಟರ್, ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಎಂದು ಸಚಿವ ಸಿ.ಟಿ ರವಿ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸಿ.ಟಿ ರವಿ ಅವರು ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿಟಿ ರವಿ, ಕಾಂಗ್ರೆಸ್ ಒಂದು ಕಡೆ ತೊಟ್ಟಿಲು ತೂಗುತ್ತೆ. ಮತ್ತೊಂದು ಕಡೆ ಮಗುವನ್ನು ಚಿವುಟುವಂತ ಕೆಲಸವನ್ನು ಮಾಡುತ್ತಿದೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದೆ. ಈ ಗಲಭೆಯಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರೇ ಆಕ್ಟರ್, ಡೈರೆಕ್ಟರ್ ಮತ್ತು ಪ್ರೊಡ್ಯೂಸರ್ ಎಂದು ಆರೋಪಿಸಿದರು.