ರಾಯಚೂರು : ಬೆಂಗಳೂರು ಗಲಭೆಗೆ ಕಾರಣವಾದ ನವೀನ್ ಅನ್ನೋ ವ್ಯಕ್ತಿ ಕಟ್ಟಾ ಕಾಂಗ್ರೆಸ್ ಬೆಂಬಲಿಗ. ನವೀನ್ ಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಇಂದು ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನಕ್ಕೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಬೆಂಗಳೂರು ಗಲಭೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಕೆಜೆ ಹಳ್ಳಿ ಹಾಗೂ ಡಿಜೆ ಹಳ್ಳಿಯ ಘಟನೆ ಪೂರ್ವ ನಿಯೋಜಿತ, ಇದು ರಾಜಕೀಯ ಲಾಭಕ್ಕಾಗಿ ನಡೆದಿರುವ ಘಟನೆ ಎಂದರು.
ಇದೇ ವೇಳೆ ಡಿ.ಕೆ ಶಿವಕುಮಾರ್ ಹೇಳಿಕೆ ಬಗ್ಗೆ ಮಾತನಾಡಿದ ಡಿಸಿಎಂ, ಬೆಂಗಳೂರು ಗಲಭೆಗೆ ಕಾರಣವಾದ ನವೀನ್ ಅನ್ನೋ ವ್ಯಕ್ತಿ ಕಟ್ಟಾ ಕಾಂಗ್ರೆಸ್ ಬೆಂಬಲಿಗ. ನವೀನ್ ಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಅವರ ಮಾವನವರ ಕುರಿತಾದ ಪೋಸ್ಟ್ ಗಳನ್ನು ನವೀನ್ ಹಾಕಿದ್ದು ಎಲ್ಲರಿಗೂ ಗೊತ್ತಿದೆ. ಯಾರೇ ಏನೇ ಹೇಳಿದರೂ ನವೀನ್ ಕಾಂಗ್ರೆಸ್ ಕಾರ್ಯಕರ್ತ ಎನ್ನುವುದು ಜಗಜ್ಜಾಹೀರಾಗಿದೆ. ಅದಕ್ಕೆ ಎಲ್ಲ ಸಾಕ್ಷಿ ಪುರಾವೆಗಳಿವೆ. ಘಟನೆಯಲ್ಲಿ ಭಾಗಿಯಾದವರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗಲಿದೆ. ರಾಜಕೀಯ ಲಾಭಕ್ಕೆ ಮಾಡಿಕೊಂಡಿರುವ ಸಂಘಟನೆಯನ್ನು ಮಟ್ಟಹಾಕಬೇಕಾಗಿದೆ ಎಂದು ತಿಳಿಸಿದರು.








