ಬೆಂಗಳೂರು : ನಗರದ ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ಆರೋಪಿಗಳನ್ನು ಬೆಂಗಳೂರಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ರವಾನೆ ಮಾಡಲಾಗುತ್ತಿದೆ.
ನಿನ್ನೆ ಪ್ರಕರಣದ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು. ಈ ವೇಳೆ ಆರೋಪಿಗಳಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಒಟ್ಟು 80 ಆರೋಪಿಗಳನ್ನು ಕೆಎಸ್‌ಆರ್‌ಟಿಸಿ ಬಸ್ ಮೂಲಕ ಬಳ್ಳಾರಿಗೆ ಶಿಫ್ಟ್ ಮಾಡಲಾಗಿದೆ.
ಪೊಲೀಸರು ರಾತ್ರಿ 12 ಗಂಟೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಕಳುಸಿಕೊಟ್ಟಿದ್ದಾರೆ. ಕೊರೊನಾ ಕಾರಣ ಮೂವರನ್ನು ಕೋವಿಡ್ ಕೇರ್ ಸೆಂಟರ್‌ಗೆ ರವಾನೆ ಮಾಡಲಾಗಿದೆ. ಉಳಿದಂತೆ ಹದಿನೈದು ಆರೋಪಿಗಳನ್ನು ಐದು ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಈ ಹದಿನೈದು ಆರೋಪಿಗಳ ವಿಚಾರಣೆಯನ್ನು ಪೊಲೀಸರು ನಡೆಸಲಿದ್ದಾರೆ.








