ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರು ಗಲಭೆ : ಸಿಎಂ ಬಿಎಸ್ ವೈಗೆ ಸಿದ್ದರಾಮಯ್ಯ ಪತ್ರ

admin by admin
August 19, 2020
in Newsbeat, Politics, ರಾಜಕೀಯ
Siddaramaiah
Share on FacebookShare on TwitterShare on WhatsappShare on Telegram

ಬೆಂಗಳೂರು : ಕೆ.ಜೆ ಹಳ್ಳಿ ಮತ್ತು ಡಿ.ಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸಿದ್ದರಾಮಯ್ಯ ಕೆ.ಜೆ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 11 ರಂದು ನಡೆದ ಘಟನೆಗಳಿಗೆ ಸರ್ಕಾರದ ವೈಫಲ್ಯವೇ ನೇರ ಕಾರಣ. ಗುಪ್ತಚರ ಇಲಾಖೆಯ ವೈಫಲ್ಯವೂ ಇದರಲ್ಲಿ ಎದ್ದು ಕಾಣುತ್ತಿದೆ ಎಂದು ಆರೋಪಿಸಿ, ಸರ್ಕಾರ ತನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಬಿಟ್ಟು ವಿರೋಧ ಪಕ್ಷವಾದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಪತ್ರದಲ್ಲಿ ಏನಿದೆ?
1. ಡಿ.ಜೆ.ಹಳ್ಳಿಯ ಘಟನೆಯ ನೈತಿಕ ಜವಾಬ್ದಾರಿಯನ್ನು ಸರ್ಕಾರವೇ ಹೊರಬೇಕು. ಆಡಳಿತ ಕೇಂದ್ರದ ಕೈಯಳತೆ ದೂರದಲ್ಲಿರುವ ಈ ಪ್ರದೇಶದಲ್ಲಾದ ಅನಾಹುತವನ್ನು ನಿಭಾಯಿಸಲು ಆಗಲಿಲ್ಲವೆಂದರೆ ಸರ್ಕಾರ ಯಾಕಿರಬೇಕು. ಪ್ರವಾದಿಯವರ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರ ಕುರಿತು ದೂರು ಬಂದ ತಕ್ಷಣ ಪೊಲೀಸರು ಕ್ರಮ ಕೈಗೊಂಡಿದ್ದರೆ ಈ ಅನಾಹುತಕ್ಕೆ ಅವಕಾಶ ಇರುತ್ತಿರಲಿಲ್ಲ.

2. ಪ್ರವಾದಿಯವರ ಬಗೆಗೆ ಕೆಟ್ಟ ಚಿತ್ರ ರಚಿಸಿ ನವೀನ್ ಎಂಬ ಹುಡುಗನಿಗೆ ಕೊಟ್ಟವರಾರು? ಆ ಚಿತ್ರಗಳು ಸೋಷಿಯಲ್ ಮೀಡಿಯಾಗಳಿಗೆ ಬಿತ್ತರಿಸಲು ಕಾರಣರಾದವರು ಯಾರ್ಯಾರು ? ಇದರ ಹಿಂದೆ ದೊಡ್ಡ ಪಿತೂರಿ ಇದ್ದಂತಿದೆ. ಈ ಕುರಿತು ಸಮರ್ಪಕವಾದ ತನಿಖೆಯಾಗಬೇಕು.

3. ಪ್ರಾಮಾಣಿಕರು, ದಕ್ಷರು ಅನ್ನಿಸಿಕೊಂಡ ಹಲವು ಪೊಲೀಸ್ ಅಧಿಕಾರಿಗಳನ್ನು ‘ನಾನ್ ಎಕ್ಸಿಕ್ಯೂಟಿವ್’ ಹುದ್ದೆಗಳಲ್ಲಿ ಕೂರಿಸಿದ್ದೀರಿ. ಭ್ರಷ್ಟರು, ಅಸೂಕ್ಷ್ಮರು ಆದ ಹಲವರಿಗೆ ಆಯಕಟ್ಟಿನ ಹುದ್ದೆಗಳನ್ನು ನೀಡಲಾಗಿದೆ. ಹೀಗಾಗಿ ಸೂಕ್ಮವಾದ ಇಂಥ ಘಟನೆಗಳನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ.

4. ಘಟನೆ ನಡೆದಿರುವುದು ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿ (ಈ ಹಿಂದೆಯೂ ಈ ಪ್ರದೇಶಗಳಲ್ಲಿ ಸಮಸ್ಯೆಗಳಾಗಿದ್ದವು) ಮತ್ತು ಘಟನೆಗೆ ಕಾರಣವಾದ ವಿಷಯವೂ ಅತ್ಯಂತ ಸೂಕ್ಷ್ಮವಾಗಿತ್ತು. ಇದನ್ನು ನಿರ್ಲಕ್ಷಿಸಲು ಕಾರಣವೇನು?

5. ಶಾಸಕರ ಮನೆಯನ್ನು,ಪೊಲೀಸ್ ಠಾಣೆಯನ್ನು ರಕ್ಷಿಸಿಕೊಳ್ಳಲಾಗದ ಸರ್ಕಾರದಿಂದ ರಾಜ್ಯದ ಜನರಿಗೆ ಯಾವ ರಕ್ಷಣೆಯನ್ನು ನೀಡಲು ಸಾಧ್ಯ? ಇದರ ಜವಾಬ್ದಾರಿಯನ್ನು ಸರ್ಕಾರ ಹೊರುವುದನ್ನು ಬಿಟ್ಟು ತಲೆಕೆಟ್ಟ. ಹುಡುಗರ ಮೇಲೆ ಹೊರಿಸಿ ತಮ್ಮ ಸರ್ಕಾರ ಅತ್ಯಂತ ಸಮರ್ಥವಾಗಿದೆ ಎಂದು ಹೇಳುವುದು ಅತ್ಯಂತ ದುಷ್ಟ ಮತ್ತು ನಿರ್ಲಜ್ಜ ರಾಜಕಾರಣದ ಪರಮಾವಧಿಯ ನಿಲುವು.

6. ಗೃಹ ಸಚಿವರನ್ನು ಭೇಟಿಯಾದ ಕರಾವಳಿಯ ಕೋಮುವಾದಿಯೊಬ್ಬನಿಗೆ, ಸಚಿವರು ನಿಮ್ಮ ಮೇಲಿನ ಎಲ್ಲಾ ಪ್ರಕರಣ ವಾಪಸ್ ತೆಗೆದುಕೊಳ್ಳುತ್ತೇವೆಂದು ಹೇಳುವ ಮಾತುಕತೆಯೊಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅದು ನಿಜವೇ ಆಗಿದ್ದರೆ ಸಮಾಜದ ಸ್ವಾಸ್ಥ್ಯವನ್ನು ನಿಮ್ಮ ಸರ್ಕಾರ ಕಾಪಾಡಲು ಸಾಧ್ಯವೆ?

7. ನೀವು ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಜನರನ್ನು ಕಮ್ಯುನಲ್ ಗೂಂಡಾಗಳೆಂದು ಗುರುತಿಸಿದ್ದೀರಿ? ಎಷ್ಟು ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ ಗಡಿಪಾರು ಮಾಡಿದ್ದೀರಿ? ಈ ಕಮ್ಯುನಲ್ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲಾ ಸಂಘಟನೆಗಳನ್ನು ನಿಷೇಧಿಸುವ ತಾಕತ್ತನ್ನು ನೀವು ಪ್ರದರ್ಶಿಸಲು ಸಾಧ್ಯವೆ? ನಿಮ್ಮ ಕಡತದಲ್ಲಿನ ದಾಖಲೆಗಳ ಪ್ರಕಾರ ನಿಮ್ಮದೇ ಪಕ್ಷದ ಅಂಗ ಸಂಘಟನೆಗಳು ಕಮ್ಯುನಲ್ ಚಟುವಟಿಕೆಗಳಲ್ಲಿ ತೊಡಗಿ ಅಸಂಖ್ಯಾತ ಪ್ರಕರಣಗಳಿವೆ. ಈ ಎಲ್ಲರ ಮೇಲೆಯೂ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಿ ನಾವು ಈ ವಿಷಯದಲ್ಲಿ ನಿಮ್ಮ ಜೊತೆ ಇರುತ್ತೇವೆ.

8. ಹಿಂದೆ ಮುಂದೆ ನೋಡದೆ ಜನರನ್ನು ಧರ್ಮದ ಆಧಾರದ ಮೇಲೆ ದೊಂಬಿಯೆಬ್ಬಿಸಲು ಪ್ರಯತ್ನಿಸಿದ ಶೃಂಗೇರಿಯ ಜೀವರಾಜ್ ಅವರ ಮೇಲೂ ಪ್ರಕರಣ ದಾಖಲಿಸಿ ಕ್ರಮವಹಿಸಿ. ಶೃಂಗೇರಿಯಲ್ಲಿ ಆರೋಪಿ ಪತ್ತೆಯಾಗುವ ಮೊದಲೇ ಅಪರಾಧಿಗಳು ಯಾರು ಎಂದು ಬಿ.ಜೆ.ಪಿ. ತೀರ್ಮಾನಿಸಿತ್ತು. ಬಡ ತರಕಾರಿ ವ್ಯಾಪಾರಿಗಳು/ಬೀದಿ ಬದಿಯ ವ್ಯಾಪಾರಿಗಳೇ ಈ ಕೃತ್ಯ ಮಾಡಿರುವುದೆಂದು ಅವರ ತಲೆಗೆ ಅಪರಾಧವನ್ನು ಕಟ್ಟಲಾಗಿತ್ತು. ಮಸೀದಿಯಲ್ಲಿ ಸಿ.ಸಿ.ಟಿವಿಗಳು ಇರದಿದ್ದರೆ ಬಜರಂಗದಳದ ಮಾಜಿ ಕಾರ್ಯಕರ್ತನ ಬದಲಿಗೆ ಇನ್ಯಾರೋ ಇರುತ್ತಿದ್ದರು.

9. ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಮಾಡಿದವರಿಂದ ನಷ್ಟ ವಸೂಲು ಮಾಡುವುದು ಒಳ್ಳೆಯ ವಿಚಾರವೇ. ಆದರೆ ಇದು ಒಂದು ಗುಂಪಿಗೆ, ಒಂದು ಘಟನೆಗೆ ಮಾತ್ರ ಸಂಬಂಧಿಸಿರಬಾರದು. ಹಾಗೆ ಮಾಡುವುದಾದರೆ ಪೂರ್ವಾನ್ವಯಗೊಳಿಸಬೇಕು. ಕಳೆದ ಮೂವತ್ತು ವರ್ಷಗಳಿಂದೀಚೆಗೆ ಕಮ್ಯುನಲ್ ಮತ್ತಿತರ ಗಲಭೆಗಳಲ್ಲಿ ಮಾಡಿರುವ ಹಾನಿಯ ನಷ್ಟವನ್ನು ಸಂಬಂಧಿಸಿದವರಿಂದ ವಸೂಲಿ ಮಾಡಬೇಕೆಂದು ಆಗ್ರಹಿಸುತ್ತೇನೆ.

10. ಆಡಳಿತ ಪಕ್ಷವೊಂದು ಸತ್ಯ ಶೋಧನಾ ತಂಡ ರಚಿಸುವುದು ಪ್ರಜಾಪ್ರಭುತ್ವದ ಭೀಕರ ಅಪಹಾಸ್ಯದಂತೆ ಕಾಣುತ್ತಿದೆ. ಆಡಳಿತ ಪಕ್ಷವೊಂದು ಸತ್ಯ ಶೋಧನೆ ಮಾಡುತ್ತೇನೆಂದು ಹೊರಟರೆ ಅದು ತನಿಖೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

11. ನಿಮ್ಮ ಸರ್ಕಾರಕ್ಕೆ ಪೊಲೀಸರ ಮೇಲೆ ನಂಬಿಕೆ ಇಲ್ಲವೆ? ನಿಮ್ಮ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಅವರಿಗೆ ಜನರ ತೆರಿಗೆಯ ಹಣದಲ್ಲಿ ಸಂಬಳ, ಸಾರಿಗೆ ಮುಂತಾದ ಸವಲತ್ತುಗಳನ್ನು ಯಾಕೆ ಕೊಡತ್ತಿದ್ದೀರಿ? ಮುಲಾಜಿಲ್ಲದೆ ಅವರನ್ನು ಮನೆಗೆ ಕಳಿಸಿ.

12. ಘಟನೆಯಲ್ಲಿ ಎಸ್ ಡಿಪಿಐ ಪಾತ್ರ ಇದೆ ಎಂದು ಹೇಳಲಾಗುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಯಾವ ಸಂಘಟನೆಯೇ ತಪ್ಪು ಮಾಡಿದ್ದರೂ ಸಮರ್ಪಕವಾದ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇನೆ.

13. ಈ ಘಟನೆಯ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳಿಂದಲೇ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ.

Tags: #Bangalore riots#Saaksha TVbjp congress
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram