ಸಂಕಷ್ಟ ದೂರವಾಗಲು ಶ್ರೀ ಕೃಷ್ಣನ ಆಶೀರ್ವಾದ ಬೇಕು-ವಸತಿ ಸಚಿವ ವಿ.ಸೋಮಣ್ಣ
ಬೆಂಗಳೂರು : ಕೃಷ್ಣ ಯಾದವ ದೇವಸ್ಥಾನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾವೇರಿಪುರ ವಾರ್ಡ್ ನಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಾನ್ಯ ವಸತಿ ಮತ್ತು ಮೂಲಸೌಲಭ್ಯ ಸಚಿವರಾದ ಶ್ರೀ ವಿ.ಸೋಮಣ್ಣರವರು ದೇಗುಲಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ದೇವನೊಬ್ಬ ನಾಮ ಹಲವು, ದೇವರು ವಿವಿಧ ರೂಪದಲ್ಲಿ ಜನ್ಮ ತಾಳಿದ್ದಾರೆ.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಸಂಸ್ಕೃತಿ, ಸಂಪ್ರಾದಯ ಆಚರಣೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ.

ಭಕ್ತರ ಆಶಯದಂತೆ 57 ದೇವಸ್ಥಾನಗಳಲ್ಲಿ ಗರ್ಭಗುಡಿ, ಭಕ್ತರು ಪ್ರವೇಶ ಮಾಡುವ ದ್ವಾರ ಮತ್ತು ಪ್ರಸಾದ ನಿಲಯ, ಹೋಮ ಮಾಡುವ ಸ್ಥಳ ಸೇರಿದಂತೆ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗಿದೆ. ದೇವಾಲಯಗಳ ಕ್ಷೇತ್ರವಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಖ್ಯಾತಿ ಪಡೆದಿದೆ ಎಂದರು.
ಈ ಸಂದರ್ಭದಲ್ಲಿ ಗೋವಿಂದರಾಜನಗರ ಮಂಡಲ ಬಿಜೆಪಿ ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಪಲ್ಲವಿ ಚನ್ನಪ್ಪ, ಕೆ.ಉಮೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ರಾಜಪ್ಪ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ನಾಗರಾಜ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.








