Bangalore | ಶಿಕ್ಷಣಸಂಸ್ಥೆಗಳು ದೇಶದ ಪ್ರಗತಿಯ ಮಾಧ್ಯಮ : ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ
ಬೆಂಗಳೂರು : ದೇಶದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಶಿಕ್ಷಣಸಂಸ್ಥೆಗಳು ದೇಶದ ಪ್ರಗತಿಯ ಮಾಧ್ಯಮವಾಗಿವೆ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಯವರು ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕು, ತಾವರೆಕೆರೆ ಹೋಬಳಿಯ ಯಲಚಗುಪ್ಪೆ ಗ್ರಾಮದಲ್ಲಿ ಬಂಟರ ಸಂಘದ ಬಿ.ಎಸ್.ಆರ್.ಎನ್.ಎಸ್ ವಿದ್ಯಾನಿಕೇತ-2 ನೂತನ ಶಾಲಾ ಕಟ್ಟಡದ ಸಂಕೀರ್ಣ ಗಣ್ಯರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು. ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ನೂತನ ಶಾಲಾ ಕಟ್ಟಡವನ್ನು ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.
ಬಳಿಕ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿಯವರು ಮಾತನಾಡಿ, ದೇಶದಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಶಿಕ್ಷಣಸಂಸ್ಥೆಗಳು ದೇಶದ ಪ್ರಗತಿಯ ಮಾಧ್ಯಮವಾಗಿದೆ. ಯಾರು ಅಕ್ಷರದಿಂದ ದೂರ ಆಗಿರುತ್ತಾರೆ, ಅವರು ಲೋಕ ಕಂಟಕರಾಗಿ ಜನರನ್ನು ಪೀಡಿಸುತ್ತಾರೆ. ಹೀಗಾಗಿ ದೇಶದ ಉನ್ನತಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು. ಅಂಥಹ ಶಿಕ್ಷಣ ನೀಡುವ ನಿಟ್ಟಿನಲ್ಲಿ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಶಿಕ್ಷಣ ಸಂಸ್ಥೆಗಳ ಹೆಸರಲ್ಲಿ ಹಣವನ್ನ ಗಳಿಸುವ ಶಿಕ್ಷಣ ಸಂಸ್ಥೆಗಳಿದ್ದಾವೆ. ಜೊತೆಗೆ ಶಿಕ್ಷಣ ಸಂಸ್ಥೆಯನ್ನ ತೆಗೆದು ಹಿಡನ್ ಅಜೆಂಡ್ ಇಟ್ಟುಕೊಂಡು ಸಮಾಜಕಕ್ಕೆ ಕಂಟಕವಾಗುವಂತ ಸಂಸ್ಥೆಗಳಿದ್ದಾವೆ.
ಆದರೆ ಶಿಕ್ಷಣ ಸಂಸ್ಥೆಗಳು ಹೇಗಿರಬೇಕು ಅಂದರೆ, ಜಗತ್ತಿನ ಸಮಾಜದ ಉನ್ನತಿಗೆ ಉತ್ತಮವಾದ ವ್ಯಕ್ತಿತ್ವನ್ನ ರೂಪಿಸುವಂತೆ ಇರಬೇಕು. ಅಂಥಹ ಶಿಕ್ಷಣ ನೀಡುವ ನಿಟ್ಟಿನಲ್ಲಿ ಬೆಂಗಳೂರು ಬಂಟ ಸಂಘದ ಮೊದಲನೆ ಘಟಕ ಬೆಳದು ನಿಂತಿದೆ. ಅದರ ಭಾಗವಾಗಿ ಇಂದು ಎರಡನೇ ಘಟಕ ಲೋಕಾರ್ಪಣೆಗೊಂಡಿದೆ. ಶಿಕ್ಷಣ ಸಂಸ್ಥೆ ಬೆಳೆದು ನಿಂತರೇ ಲೋಕಕ್ಕೆ ಉತ್ತಮ ಪೌರರನ್ನ ಕೊಡುಗೆಯಾಗಿ ನೀಡುತ್ತದೆ. ದಕ್ಷಿಣ ಕನ್ನಡ ಭಾಗದಲ್ಲಿ ಬಂಟ ಸಮುದಾಯದವರು ಕೃಷಿಯನ್ನ ಪ್ರಧಾನವಾಗಿಟ್ಟುಕೊಂಡವರು. ಕೃಷಿ ಕ್ಷೇತ್ರದಿಂದ ದೇಶಕ್ಕೆ ಅನ್ನದಾತರಾಗಿ ಬೆಳೆದಂತಹ ಈ ಸಮುದಾಯ, ಇಂದು ಶಿಕ್ಷಣ ಕ್ಷೇತ್ರದಲ್ಲಿ ಹೆಜ್ಜೆ ಇಡುತ್ತಿದೆ. ಅದೇ ರೀತಿ ಈ ಶಿಕ್ಷಣ ಸಂಸ್ಥೆ ರಾಜ್ಯಕ್ಕೆ ದೇಶಕ್ಕೆ ಅಷ್ಟೆ ಅಲ್ಲದೆ ಇಡೀ ವಿಶ್ವಕ್ಕೆ ಮಾದರಿಯಾಗಿ ಬೆಳಿಯಲಿ ಎಂದು ಆಶೀರ್ವದಿಸಿದರು.