Bangalore | ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆ ಬೊಮ್ಮಾಯಿ
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಚಂದ್ರು ಕೊಲೆ ವಿಚಾರವಾಗಿ ಸಿ.ಟಿ.ರವಿ ಹೇಳಿಕೆಯನ್ನು ಖಂಡಿಸಿ, ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ರಾಜ್ಯದ ಪೊಲೀಸ್ ಮಹಾನಿರ್ದೇಶಕರ ಹೇಳಿಕೆಯನ್ನು ಧಿಕ್ಕರಿಸುತ್ತಿರುವ ಈ ಸಿ.ಟಿ.ರವಿ, ರವಿಕುಮಾರ್ ಮೊದಲಾದ ಕೂಗುಮಾರಿಗಳ ಬಾಯಿಮುಚ್ಚಿಸಲಾಗದಷ್ಟು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೂಕ ಬಸವಣ್ಣನಾಗಿದ್ದಾರೆ. ಇಂತಹ ತಂಟೆಕೋರರ ಬೇಜವಾಬ್ದಾರಿ ಹೇಳಿಕೆಗಳಿಂದಾಗಿ ಇಡೀ ಪೊಲೀಸ್ ಇಲಾಖೆ ನೈತಿಕವಾಗಿ ಕುಸಿದುಹೋಗುತ್ತಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ರಾಜಕೀಯ ದುರುದ್ದೇಶದಿಂದ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಮತ್ತು ಸಂಘ ಪರಿವಾರ ನಡೆಸುತ್ತಿರುವ ಪುಂಡಾಟಿಕಗಳಿಗಳಿಂದಾಗಿ ಹೊರರಾಜ್ಯ ಮತ್ತು ಹೊರದೇಶಗಳ ಎದುರು ಕೂಡುಬಾಳ್ವೆಗೆ ಹೆಸರಾದ ಶಾಂತಿ ಮತ್ತು ಸೌಹಾರ್ದಪ್ರಿಯ ಕನ್ನಡಿಗರು ತಲೆತಗ್ಗಿಸುವಂತಾಗಿದೆ. ಇದನ್ನು ಕನ್ನಡಿಗರು ಎಂದೂ ಕ್ಷಮಿಸರು.
ಇದು ಬಸವರಾಜ ಬೊಮ್ಮಾಯಿ ಅವರೇ ಮಾಡಿರುವ ಪಾಪದ ಫಲ. ಬೀದಿಗೂಂಡಾಗಳ ಪುಂಡಾಟಿಕೆಯನ್ನು ಕ್ರಿಯೆಗೆ ಪ್ರತಿಕ್ರಿಯೆ ಎಂದು ಸಮರ್ಥಿಸಿಕೊಂಡ ನಂತರವೇ ಕೊಲೆ, ಹಿಂಸಾಚಾರ, ಗಲಾಟೆ, ದೌರ್ಜನ್ಯಗಳ ಹೊಸ ಸರಣಿ ಪ್ರಾರಂಭವಾಗಿದ್ದು. ಇದರಿಂದ ಕಾನೂನು ವ್ಯವಸ್ಥೆಯೇ ಕುಸಿದುಬಿದ್ದು ನಾಗರಿಕ ಯುದ್ಧಕ್ಕೆ ದಾರಿಮಾಡಿಕೊಟ್ಟಿದೆ.
ಸಂಘ ಪರಿವಾರದ ಜೊತೆಗಿನ ಸಹಯೋಗದಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಹರಡುತ್ತಿರುವ ಕೋಮುದ್ವೇಷದ ವಾತಾವರಣದಿಂದ ರಾಜ್ಯದ ಉದ್ಯಮಿಗಳು ಬೇಸತ್ತುಹೋಗಿ ಹೊರ ರಾಜ್ಯದ ಕಡೆ ಮುಖಮಾಡುತ್ತಿದ್ದಾರೆ. ಕಿರಣ್ ಮಜುಮ್ದಾರ್ ಶಾ ಅವರಂತಹ ಖ್ಯಾತನಾಮರು ಕೂಡಾ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿರುವುದ ಕಳವಳಕಾರಿ ಬೆಳವಣಿಗೆ.
ರಾಜ್ಯ ಬೇಡದ ಕೂಸು, ಅಳುವ ಕೂಸುಗಳನ್ನು ನೋಡಿಯಾಗಿದೆ. ಈಗಿನದ್ದು ಆಡುವ ಗೊಂಬೆಯ ಸರ್ಕಾರ. ಆ ಕೂಸುಗಳಿಗೆ ಜೀವವಾದರೂ ಇತ್ತು, ಈಗಿನದ್ದು ಸಂಪೂರ್ಣ ನಿರ್ಜೀವ ಆಟದ ಗೊಂಬೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಘ ಪರಿವಾರದ ಪುಂಡರ ಕೈಯಲ್ಲಿನ ಆಟಿಕೆಯ ಗೊಂಬೆಯಂತಾಗಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
bangalore-siddaramaiah tweet An act of Mareecha in the name of ‘Rama’!!









