Bangalore | ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು
ಬೆಂಗಳೂರು : ಚಿನ್ನಾಭರಣಕ್ಕಾಗಿ ಒಂಟಿ ವೃದ್ಧೆಯನ್ನು ಕೊಂದು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇದೇ ತಿಂಗಳ 8 ರಂದು ವಿದ್ಯಾರಣ್ಯಪುರದ ಅಂಬಾಭವಾನಿ ಲೇಔಟ್ ನಲ್ಲಿ 68 ವರ್ಷದ ಪ್ರಸನ್ನ ಕುಮಾರಿ ಅವರನ್ನು ಕೊಲೆ ಮಾಡಲಾಗಿತ್ತು.
ಈ ಸಂಬಂಧ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ತನಿಖೆ ಮುಂದುವರೆಸಿದ್ದ ಪೊಲೀಸರು, ನಾಗೇಂದ್ರ (31),ಕಾಮರಾಜು(28) ಎಂಬುವವರನ್ನು ಬಂಧಿಸಿದ್ದಾರೆ.
ಇವರು ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಪ್ರಸನ್ನ ಕುಮಾರಿ ಅವರನ್ನು ಕೊಲೆ ಮಾಡಿದ್ದರು.
ನಂತರ ಆಕೆಯ ಮೈಮೇಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ರು.
ಬಂಧಿತರಿಂದ 68 ಗ್ರಾಂ ತೂಕದ ಚಿನ್ನಾಭರಣ, ಬೈಕ್, ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.