ಬೆಂಗಳೂರು : ಮೂರು ಮಂದಿ ಡ್ರಗ್ ಪೆಡ್ಲರ್ ಗಳ ಬಂಧನ
ಬೆಂಗಳೂರು : ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂರು ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 30 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಕೊಡಿಗೇಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು.
ಇದರ ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರ ಬಳಿ 500 ಎಲ್ ಎಕ್ಸ್ ಡಿ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಎನ್ ಡಿಪಿಎಸ್ ಅಡಿ ಕೇಸ್ ದಾಖಲು ಮಾಡಲಾಗಿದೆ.