ಬೆಂಗಳೂರು ವಿವಿ ಪ್ರೊ. ಅಶೋಕ್ ಕುಮಾರ್ ಆತ್ಮಹತ್ಯೆ : ಡಿಕೆಶಿ ಹೇಳಿದ್ದೇನು..?
ಬೆಂಗಳೂರು : ಬೆಂಗಳೂರು ವಿವಿ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆ ಪ್ರಕರಣನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಂಗಳೂರು ವಿವಿ ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆಯಲ್ಲಿ ನಿಗೂಢತೆ ಇದೆ.
ನಾಲ್ಕು ಜನ ಉಪಕುಲಪತಿಗಳ ನೇಮಕದಲ್ಲಿ ವ್ಯಾಪಾರ ವಹಿವಾಟು ನಡೆಸಲಾಗಿದೆ. ಉಪಕುಲಪತಿಯಾಗಿ ನೇಮಕ ಮಾಡಲು ಹಣ ಕೊಟ್ಟರೂ ನೇಮಕವಾಲಿಲ್ಲ, ತಾವು ಕೊಟ್ಟ ಹಣ ವಾಪಸ್ ಬರಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸರ್ಕಾರದಲ್ಲಿ ವಿಶ್ವವಿದ್ಯಾಲಯದ ಉಪಕುಲಪತಿ ಪದವಿಯನ್ನು ಮಾರಾಟಕ್ಕೆ ಇಡಲಾಗಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಬೆಚ್ಚಿಬಿದ್ದ ಪಿರಿಯಾಪಟ್ಟಣ: ಹಾಡಹಗಲೇ ಬೆಂಕಿ ಹಚ್ಚಿ ಯುವತಿಯ ಕೊಲೆ..!
ಪ್ರಕರಣದಲ್ಲಿ ಯಾರ ಕೈವಾಡವಿದೆಯೋ ಗೊತ್ತಿಲ್ಲ. ಹಣವನ್ನು ಯಾವ ಮಂತ್ರಿ ತೆಗೆದುಕೊಂಡರೆಂದು ಗೊತ್ತಿಲ್ಲ. ಆದ್ರೆ ಉಪಕುಲಪತಿಯಾಗಲು 2.5 ಕೋಟಿ ಹಣ ರೂ. ಕೊಟ್ಟಿದ್ದರು ಎಂದು ಚರ್ಚೆ ನಡೆಯುತ್ತಿದೆ.
ಈ ಪ್ರಕರಣದಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗುತ್ತಿದೆ. ಪುನಃ ಈ ಬಗ್ಗೆ ತನಿಖೆ ನಡೆಸಬೇಕು. ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಈ ಬಗ್ಗೆ ಸಿಎಂ ತಕ್ಷಣ ತನಿಖೆಗೆ ಆದೇಶ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು.
ಇದೇ ವೇಳೆ ವಿದ್ಯುತ್ ದರ ಏರಿಕೆ ವಿಚಾರವಾಗಿ ಮಾತನಾಡಿದ ಡಿಕೆಶಿ, ಈ ಬಾರಿ ಉತ್ತಮ ಮಳೆಯಾಗಿದೆ, ಆದರೂ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯುನಿಟ್ ಗೆ 40 ಪೈಸೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಇದು ಎಲ್ಲ ವರ್ಗದ ಜನರ ವಿರೋಧಿ, ಕೈಗಾರಿಕೆಗಳ, ರೈತರ, ವರ್ತಕರ, ಉದ್ಯಮಗಳ ವಿರೋಧಿ ನಿರ್ಧಾರವಾಗಿದೆ ಎಂದು ಕಿಡಿಕಾರಿದ ಡಿಕೆಶಿ, ವಿದ್ಯುತ್ ದರ ಹೆಚ್ಚಳನ್ನು ಕೂಡಲೇ ಹಿಂಪಡೆಯಬೇಕು. ಒಂದೂವರೆ ವರ್ಷಗಳ ಕಾಲ ದರ ಏರಿಕೆ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel