ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಸಾಧ್ಯತೆ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆ ಆಗಲಿದೆ ಎಂದು ಐಎಂಡಿ ಬೆಂಗಳೂರು ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ತಿಳಿಸಿದ್ದಾರೆ.
ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದಲ್ಲಿ ಮಾನ್ಸೂನ್ ಮತ್ತಷ್ಟು ತೀವ್ರಗೊಂಡಿದೆ. ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆ ಮುಂದುವರೆಯರಿದೆ. ಈ ಮಳೆಯಿಂದ ವಾತಾವರಣ ತಂಪಾಗಲಿದೆ ಎಂದು ಹೇಳಿದ್ದಾರೆ.
ಇನ್ನು ನಿನ್ನೆ ಸಂಜೆ 5.30ರ ಸುಮಾರಿನ ವರೆಗೂ ಬೆಂಗಳೂರು ನಗರದಲ್ಲಿ 8.4 ಎಂಎಂ ಮಳೆಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.8 ಎಂಎಂ ಮತ್ತು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 10 ಮಿಲಿಮೀಟರ್ ಮಳೆಯಾಗಿದೆ.
ಭಾರಿ ಮಳೆ ಹಿನ್ನಲೆ ದಕ್ಷಿಣ ಕನ್ನಡ ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರ ನೀಡಲಾಗಿದೆ.








