Bangalore | ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ದೇಶ ಪ್ರಗತಿ ಪ್ರಗತಿ ಸಾಧ್ಯ
ಬೆಂಗಳೂರು : ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ ದೇಶ ಪ್ರಗತಿ ಹೊಂದಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಮಹಿಳೆಯರು ಆರ್ಥಿಕವಾಗಿ ಸಬಲರಾದಾಗ ಮಾತ್ರ, ದೇಶ ಪ್ರಗತಿ ಹೊಂದಲು ಸಾಧ್ಯ.
ಮಹಿಳೆಯರನ್ನು ಎಷ್ಟು ಪೂಜನೀಯವಾಗಿ ನೋಡಿದರೂ ಕೂಡ, ಅವರ ಶಕ್ತಿ ಸದ್ಬಳಕೆಯಾಗದಿದ್ದರೆ, ಅಭಿವೃದ್ಧಿ ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು.
ದೇಶದ ಕೌಟುಂಬಿಕ ವ್ಯವಸ್ಥೆಯಲ್ಲಿ , ಆರ್ಥಿಕ ಸಮತೋಲನ ಕಾಪಾಡಿಕೊಳ್ಳುವಲ್ಲಿ ಮಹಿಳೆ ಉನ್ನತ ಪಾತ್ರ ವಹಿಸುತ್ತಾರೆ.
ಮಹಿಳೆಯರು ಹೆಚ್ಚು ಪ್ರಾಮಾಣಿಕರು ಹಾಗೂ ನೇರ ನಡೆಯವರಾಗಿರುವುದರಿಂದ, ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಶಕ್ತರಾಗಿರುತ್ತಾರೆ ಎಂದು ತಿಳಿಸಿದರು.
bangalore- Women’s Day Special program basavaraj bommai









