Bangalore | ವಿದ್ಯಾದಾನದ ಮೂಲಕ ಭವಿಷ್ಯದ ಭಾರತ ನಿರ್ಮಿಸುತ್ತಿರುವ ಶಿಕ್ಷಕರಿಗೆ ಧನ್ಯವಾದ- ಸಚಿವ ವಿ.ಸೋಮಣ್ಣ
ಬೆಂಗಳೂರು- ಪರಿಸರ ದಿನದ ಅಂಗವಾಗಿ ಶ್ರೀ ವಿ.ಸೋಮಣ್ಣ ಪ್ರತಿಷ್ಠಾನದಿಂದ ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗೋವಿಂದರಾಜನಗರ ಕ್ಷೇತ್ರದ ಬಿಜಿಎಸ್ ಮೂದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಎಸ್ ಎಸ್ ಎಲ್ ಸಿಯಲ್ಲಿ ಶೇ.85 ಕ್ಕಿಂತ ಅಧಿಕ ಅಂಕ ಗಳಿಸಿದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಸುಮಾರು 600ಕ್ಕೂ ಆಧಿಕ ವಿದ್ಯಾರ್ಥಿಗಳಿಗೆ ವಿ.ಸೋಮಣ್ಣ ಪ್ರತಿಷ್ಠಾನದ ವತಿಯಿಂದ ಪ್ರತಿಭಾ ಪುರಸ್ಕಾರ ಏರ್ಪಡಿಸಿರುವುದು ಸಂತಸ ತಂದಿದೆ.
ಗೋವಿಂದರಾಜನಗರದಲ್ಲಿ ಮಧ್ಯಮ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಪಾಲಕರಿಗೆ ಯಾವುದೇ ಹೊರೆಯಾಗದಂತೆ ಕ್ಷೇತ್ರಾದ್ಯಂತ ಶಾಲೆಗಳ ನವೀಕರಣ, ನೂತನ ಶಾಲೆಗಳ ನಿರ್ಮಾಣ ಕಾರ್ಯ ಮಾಡಲಾಗಿದೆ. ಉತ್ತಮ ಶಿಕ್ಷಣ ಸೌಲಭ್ಯವನ್ನು ಒದಗಿಸಿದಾಗ ಮಾತ್ರ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶವನ್ನು ನಿರೀಕ್ಷಿಸಬಹುದು.

ವಿದ್ಯಾರ್ಥಿಗಳ ಯಶಸ್ಸಿಗೆ ಕಾರಣರಾದ ಪಾಲಕರು ಹಾಗೂ ಶಿಕ್ಷಕರಿಗೆ ನನ್ನ ಧನ್ಯವಾದಗಳು. ವಿದ್ಯಾದಾನದ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸುತ್ತಿರುವ ಶಿಕ್ಷಕ ವಂದಕ್ಕೆ ನಮನ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿಕ್ಷಣ ಕ್ಷೇತ್ರ ಉತ್ತಮ ರೀತಿಯಲ್ಲಿ ಬದಲಾವಣೆಯಾಗುತ್ತಿದೆ. ಇದು ಭವ್ಯ ಭಾರತದ ಭವಿಷ್ಯಕ್ಕೆ ಸಾಕಷ್ಟು ಕೊಡುಗೆ ನೀಡಲಿದೆ. ಇನ್ನು, ಶಿಕ್ಷಣ ಸಚಿವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರಿಂದ ಕಾರ್ಯಕ್ರಮದ ಘನತೆ ಹೆಚ್ಚಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಗೆ ಪಣ ತೊಡಲಾಗಿದ್ದು, ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹಾನಗರಕ್ಕೆ ಸಾಕಷ್ಟು ಕೊಡುಗೆಗಳನ್ನು ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಸ್ವಂತ ಸೂರು ಹೊಂದಬೇಕೆಂಬ ಕನಸಿರುವ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ವಸತಿ ಯೋಜನೆಗಳನ್ನು ಘೋಷಿಸಲಾಗಿದೆ. ಒಂದು ಲಕ್ಷ ಬಹುಮಹಡಿ, ನಗರದ ಕೊಳಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ಸೂರ್ಯ ನಗರದಂಥ ಯೋಜನೆಗಳು ಸಾವಿರಾರು ಜನರಿಗೆ ಆಸರೆಯಾಗಿವೆ ಎಂದರು.








