Bangalore | ಯುವಕನ ಮೇಲೆ ಮುಸುಕುಧಾರಿಗಳಿಂದ ಹಲ್ಲೆ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಮೇಲೆ ಮುಸುಕುಧಾರಿಗಳು ಹಲ್ಲೆ ನಡೆಸಿದ್ದಾರೆ.
ನಗರದ ಚಾಮರಾಜಪೇಟೆಯ ಅಜಾದ್ ನಗರದಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದೆ.
ಅವಿನಾಶ್ ಎಂಬ ಯುವಕನ ತಲೆ ಮೇಲೆ ಬಾಟಲಿನಿಂದ ಹೊಡೆದು ಡ್ರ್ಯಾಗರ್ ನಿಂದ ಇರಿಯಲಾಗಿದೆ.
ಮೂರು ಬೈಕ್ ಗಳಲ್ಲಿ ಬಂದ ಮುಸುಕುಧಾರಿ ಯುವಕರು ಈ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ಮಧ್ಯರಾತ್ರಿ ಸ್ನೇಹಿತರ ಜೊತೆ ಊಟ ಮುಗಿಸಿಕೊಂಡು ಬೈಕ್ ಗಳಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ಅಟ್ಯಾಕ್ ಮಾಡಿದ್ದಾರೆ.
ಸದ್ಯ ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ.