ಢಾಕಾ: ಶೇಖ್ ಹಸೀನಾ (Sheikh Hasina) ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡುತ್ತಿದ್ದಂತೆ ಬಾಂಗ್ಲಾದಲ್ಲಿನ ಪ್ರತಿಭಟನಾಕಾರರು ಮತ್ತೊಂದು ರೀತಿಯ ಪ್ರತಿಭಟನೆ ನಡೆಸಿದ್ದಾರೆ.
ಬಾಂಗ್ಲಾದೇಶ (Bangladesh) ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಾಧೀಶರು ಮತ್ತು ಮೇಲ್ಮನವಿ ವಿಭಾಗದ ಜಡ್ಜ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ (Protest) ನಡೆಸಲಾಗುತ್ತಿದೆ. ಹೀಗಾಗಿ ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಸುತ್ತುವರೆದಿದ್ದಾರೆ. ಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ರಾಜೀನಾಮೆ ನೀಡದಿದ್ದರೆ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ. ವಿದ್ಯಾರ್ಥಿಗಳು, ವಕೀಲರು ಸೇರಿದಂತೆ ನೂರಾರು ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನು ಗಮನಿಸಿದರೆ, ಬಾಂಗ್ಲಾದಲ್ಲಿ ಇನ್ನೂ ಆತಂಕದ ವಾತಾವರಣವಿದೆ.