ಬಾಂಗ್ಲಾದೇಶದ ಢಾಕಾದಲ್ಲಿ ಸ್ಫೋಟ : 7 ಜನ ಸಾವು, 50 ಮಂದಿಗೆ ಗಾಯ
ಬಾಂಗ್ಲಾದೇಶ : ಭಾರೀ ಸ್ಫೋಟ ಸಂಭವಿಸಿ, ಕಟ್ಟಡ ಕುಸಿದು 7 ಮಂದಿ ಸಾವನ್ನಪ್ಪಿರುವ ಘಟನೆ ಬಾಂಗ್ಲಾದೇಶದ ರಾಜಧಾನಿ ಢಾಕಾದ ಮೊಗ್ ಬಜಾರ್ ಪ್ರದೇಶದಲ್ಲಿ ನಡೆದಿದೆ.. ಈ ದುರ್ಘಟನೆಯಲ್ಲಿ ಸುಮಾರು 50 ಮಂದಿ ಗಾಯಗೊಂಡಿದ್ದಾರೆ ಎಂದು ಮೆಟ್ರೋಪಾಲಿಟನ್ ಪೊಲೀಸ್ ಆಯುಕ್ತ ಶಫಿಕುಲ್ ಇಸ್ಲಾಂ ತಿಳಿಸಿದ್ದಾರೆ. ಮೂರು ಅಂತಸ್ತಿನ ಕಟ್ಟಡ ಕುಸಿದಿದೆ. ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ.. ಈ ಘಟನೆಯಲ್ಲಿ 7 ಜನರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಪಾದಚಾರಿಗಳು ಸಹ ಗಾಯಗೊಂಡಿದ್ದಾರೆ. ಇನ್ನೂ ಸ್ಫೋಟದಿಂದ ಎರಡು ಬಸ್ ಗಳಿಗೂ ಹಾನಿಯಾಗಿದೆ. ಗಾಯಗೊಂಡವರನ್ನುಢಾಕಾ ಮೆಡಿಕಲ್ ಕಾಲೇಜ್ ಆಸ್ಪತ್ರೆ ಮತ್ತು ಶೇಖ್ ಹಸೀನಾ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಬರ್ನ್ ಅಂಡ್ ಪ್ಲಾಸ್ಟಿಕ್ ಸರ್ಜರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 13 ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮೃತದೇಹಗಳನ್ನ ಹೊರತೆಗೆದಿದ್ದಾರೆ.. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ..