Bangladesh : ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಸ್ಪೋಟ ; 17 ಮಂದಿ ಸಾವು…
ಬಾಂಗ್ಲಾದೇಶದ ರಾಜಧಾನಿ ಢಾಕದಲ್ಲಿ ಏಳು ಅಂತಸ್ಥಿನ ವಾಣಿಜ್ಯ ಕಟ್ಟಡದಲ್ಲಿ ಸ್ಪೋಟ ಸಂಭವಿಸಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಐದು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 4:45 ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕುಸಿದ ಕಟ್ಟಡಗಳ ಅವಶೇಷದಿಂದ ಈಗಾಗಲೇ ಏಳು ಶವಗಳನ್ನ ವಶಪಡಿಸಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಕನಿಷ್ಠ 100 ಜನರು ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದು, ಹಲವರು ತೀವ್ರ ನಿಘಾ ಘಟಕದಲ್ಲಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಬ್ಯಾಂಕ್ ಶಾಖೆ ಮತ್ತು ಪಿಂಗಾಣಿ ಮತ್ತು ಸ್ಯಾನಿಟರಿ ವಸ್ತುಗಳ ಅಂಗಡಿಗಳನ್ ಹೊಂದಿರುವ ಐದು ಅಂತಸ್ತಿನ ಕಟ್ಟಡ ಸ್ಪೋಟಗೊಂಡಿದೆ. ಗಾಯಾಳುಗಳನ್ನ ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಡಿಎಂಸಿಎಚ್ ಪೊಲೀಸ್ ಹೊರ ಠಾಣೆ ಇನ್ಸ್‌ಪೆಕ್ಟರ್ ಬಚ್ಚು ಮಿಯಾ ತಿಳಿಸಿದ್ದಾರೆ.
ಸ್ಪೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಸ್ಥಳೀಯ ನಿವಾಸಿಗಳು ಕಟ್ಟಡದೊಳಗೆ ಅಕ್ರಮವಾಗಿ ಸಂಗ್ರಹಿಸಲಾದ ರಾಸಾಯನಿಕಗಳು ಹೆಚ್ಚಾಗಿ ಸ್ಫೋಟಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಿದ್ದಾರೆ.
Bangladesh : Explosion in commercial building; 17 people died.