ಉಡುಪಿ : ಬೆಂಗಳೂರಿನಲ್ಲಿ ಪುಂಡರ ಪುಂಡಾಟ ಸಂಬಂಧ ಮುಖ್ಯ ಸಚೇತಕ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಈ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಸುನಿಲ್ ಕುಮಾರ್ ಅವರು ಪೊಲೀಸರ ಕ್ರಮವನ್ನು ಸ್ವಾಗತಿಸುತ್ತೇನೆ. ದೇಶದ ಕಾನೂನನ್ನ ಗೌರವಿಸಬೇಕು. ಗಲಭೆಯಿಂದ ಕೋಟ್ಯಾಂತರ ರೂಪಾಯಿ ಸಾರ್ವಜನಿಕ ಆಸ್ತಿ ನಷ್ಟ ಆಗಿದೆ. ಗಲಭೆಕೋರರ ಆಸ್ತಿಯನ್ನು ಜಪ್ತಿ ಮಾಡಬೇಕು. ರಾಜ್ಯ ಸರ್ಕಾರವನ್ನು ನಾನು ಒತ್ತಾಯ ಮಾಡುತ್ತೇನೆ ಎಂದಿದ್ದಾರೆ.








