ರಾಜ್ಯದಲ್ಲಿ ಬ್ಯಾಂಕ್ ಚೆಕ್ ಗಳು ಕನ್ನಡದಲ್ಲಿಯೇ ಇರಲಿ : ವಾಟಾಳ್ ನಾಗರಾಜ್ Vatal Nagaraj saaksha tv
ಬೆಂಗಳೂರು : ಇಡೀ ರಾಜ್ಯದಲ್ಲಿ ಎಲ್ಲಾ ಬ್ಯಾಂಕುಗಳ ಚೆಕ್ಕುಗಳು ಕನ್ನಡದಲ್ಲಿಯೇ ಇರಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಚಳವಳಿ ನಡೆಸಲಾಗಿದೆ.
ಕನ್ನಡ ಪರ ಸಂಘಟನೆಗಳ ನಾಯಕರು ಭಾರತೀಯ ಸ್ಟೇಟ್ ಬ್ಯಾಂಕ್ ಮುಂಭಾಗ ಹಿಂದಿ ಭಾಷೆ ಹೊಂದಿರುವ ಚೆಕ್ ಸುಡುವ ಮೂಲಕ ಆಕ್ರೋಶ ಹೊರಹಾಕಿದರು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಇಡೀ ರಾಜ್ಯದಲ್ಲಿ ಎಲ್ಲಾ ಬ್ಯಾಂಕುಗಳ ಚೆಕ್ಕುಗಳು ಕನ್ನಡದಲ್ಲಿಯೇ ಇರಬೇಕು. ನಮಗೆ ಹಿಂದಿ ಬೇಡವೇ ಬೇಡ.
ಈ ನಾಡಿನ ಭಾಷೆ ಕನ್ನಡ ಹೀಗಾಗಿ ಎಲ್ಲೆಲ್ಲೂ ಕನ್ನಡವಾಗಬೇಕು. ಬ್ಯಾಂಕ್ ಗಳಲ್ಲಿ ಸಂಪೂರ್ಣ ಕನ್ನಡ ಬಳಸಬೇಕು. ಕನ್ನಡಿಗರಿಗೆ ಬ್ಯಾಂಕ್ ಗಳಲ್ಲಿ ಅತೀ ಹೆಚ್ಚು ಉದ್ಯೋಗವಕಾಶ ಸಿಗಬೇಕು ಎಂದು ಒತ್ತಾಯಿಸಿದರು.









