Bank of Maharashtra Recruitment 2025 : ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಅಗತ್ಯವಿರುವ ಜೆನೆರಾಲಿಸ್ಟ್ ಆಫೀಸರ್ ಸ್ಕೇಲ್-2 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ :
ಜೆನೆರಾಲಿಸ್ಟ್ ಆಫೀಸರ್ ಸ್ಕೇಲ್-2
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿಯಲ್ಲಿ ಕನಿಷ್ಠ ಸರಾಸರಿ ಶೇಕಡಾ 60% (ಎಸ್ಸಿ, ಎಸ್ಟಿ, ಒಬಿಸಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು 55%) ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಾನ :
ದಿನಾಂಕ 31/07/2025ಕ್ಕೆ ಅಭ್ಯರ್ಥಿಗಳು ಕನಿಷ್ಠ 22 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಅನುಭವ :
ಯಾವುದೇ ಶೆಡ್ಯೂಲ್ಡ್ ಪಬ್ಲಿಕ್ ಸೆಕ್ಟರ್ ಬ್ಯಾಂಕ್ ಹಾಗೂ ಶೆಡ್ಯೂಲ್ಡ್ ಪ್ರೈವೇಟ್ ಸೆಕ್ಟರ್ ಬ್ಯಾಂಕುಗಳಲ್ಲಿ 3 ವರ್ಷ ಆಫೀಸರ್ ಆಗಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 64,820 ರಿಂದ ರೂ. 93,960 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಆನ್‌ಲೈನ್ ಪರೀಕ್ಷೆ ನಡೆಸಿ ಅದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ 1:3ರ ಅನುಪಾತದಲ್ಲಿ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಹುಬ್ಬಳ್ಳಿ/ ಧಾರವಾಡ
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ :
• ಸಾಮಾನ್ಯ/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳು – ರೂ. 1180
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 118
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 13, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 30, 2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 30, 2025
Website:https://ibpsonline.ibps.in/bomjul25/








