Bank strike cancelled
ಇಂದು ಕರೆ ನೀಡಿದ್ದ ಬ್ಯಾಂಕ್ ಮುಷ್ಕರ ರದ್ದಾಗಿದ್ದು, ಬ್ಯಾಂಕ್ ಗಳು ಎಂದಿನಂತೆ ಕಾರ್ಯಚರಿಸಲಿದೆ.
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಇಂದು ಒಂದು ದಿನದ ಮುಷ್ಕರಕ್ಕೆ ಕರೆ ನೀಡಿತ್ತು.
ಉದ್ಯೋಗ ಹೊರಗುತ್ತಿಗೆಯನ್ನು ವಿರೋಧಿಸಿ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ಇಂದು ಕರೆ ನೀಡಿದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದೆ.
ಕೇಂದ್ರ ಸರ್ಕಾರವು ಬ್ಯಾಂಕ್ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಿ, ಮುಷ್ಕರ ಕೈಬಿಡುವಂತೆ ಮನವಿ ಮಾಡಿತ್ತು. ಕೇಂದ್ರ ಸರ್ಕಾರವು ಸಂಧಾನಕ್ಕೆ ಮುಂದಾದ ಹಿನ್ನೆಲೆಯಲ್ಲಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದೆ.
ಉದ್ಯೋಗ ಕಡಿತ, ಏಕಪಕ್ಷೀಯ ವರ್ಗಾವಣೆ, ಹೊರಗುತ್ತಿಗೆ, ಸಿಬ್ಬಂದಿಗಳಿಗೆ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ ಇಂದು ಮುಷ್ಕರಕ್ಕೆ ಕರೆ ನೀಡಿತ್ತು.








