ಬೆಂಗಳೂರು : ನಾಳೆ ಡಿ.ಕೆ ಶಿವಕುಮಾರ್ ಕೆಪಿಸಿಸಿ ಪದಗ್ರಹಣ ಕಾರ್ಯಕ್ರಮಕ್ಕೆಂದು ಕಾಂಗ್ರೆಸ್ ಸಮಿತಿ ವತಿಯಿಂದ ಅಳವಡಿಸಿರುವ ಅನಧಿಕೃತ ಬ್ಯಾನರ್ ಮತ್ತು ಫ್ಲೆಕ್ಸ್ ತೆರವುಗೊಳಿಸುವಂತೆ ಬಿಬಿಎಂಪಿಗೆ ಬಿಜೆಪಿ ದೂರು ನೀಡಿದೆ.
ಬಿಜೆಪಿ ಬೆಂಗಳೂರು ಕೇಂದ್ರ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಅಭಿಲಾಷ್ ರೆಡ್ಡಿ ನೇತೃತ್ವದಲ್ಲಿ ದೂರು ನೀಡಲಾಯಿತು. ನಂತರ ಮಾತನಾಡಿದ ಅಭಿಲಾಷ್ ರೆಡ್ಡಿ, ಕೋವಿಡ್ ಸಂಧರ್ಭದಲ್ಲಿ ಬಿಬಿಎಂಪಿ ನಗರದ ಸ್ವಾಸ್ತ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಆದರೆ, ನಗರ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ಹಾಕಬಾರದು ಎನ್ನುವ ಆದೇಶವಿದ್ದರೂ ಕೂಡಾ ಪ್ರತಿಜ್ಞಾ ಕಾರ್ಯಕ್ರಮದ ಅಂಗವಾಗಿ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಸಿ ನಗರದ ಸೌಂದರ್ಯವನ್ನು ಹಾಳು ಮಾಡುತ್ತಿದ್ದಾರೆ. ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್ ಹಾಗೂ ಫ್ಲೆಕ್ಸ್‍ಗಳನ್ನು ತೆಗೆದು ಹಾಕಿ ಎಂದು ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಹಾಗೂ ಆಯುಕ್ತರಾದ ಅನಿಲ್ ಕುಮಾರ್ ಅವರನ್ನು ಒತ್ತಾಯಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಈ ಕೂಡಲೇ ಅನಧಿಕೃತವಾಗಿ ಹಾಕಿರುವ ಬ್ಯಾನರ್ ಹಾಗೂ ಫ್ಲೆಕ್ಸ್ ಗಳನ್ನು ತಗೆದು ಹಾಕಲು ಹಾಗೂ ಅಂತಹ ವ್ಯಕ್ತಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಿದರು.