ವನ್ಯಜೀವಿ ಸಂರಕ್ಷಣೆಗಾಗಿ ಇನ್ಫೋಸಿಸ್ ಫೌಂಡೇಶನ್ ನ ಅಧ್ಯಕ್ಷೆ ಸುಧಾಮೂರ್ತಿ ಅವರು ನೀಡಿರುವ ಕೊಡುಗೆ ಸ್ಮರಣಾರ್ಥ ಹಾಗೂ ಸುಧಾ ಮೂರ್ತಿ ಅವರಿಗೆ ಗೌರವ ಸೂಚಿಸುವ ಸಲುವಾಗಿ ಆನೆ ಮರಿಯೊಂದಕ್ಕೆ ಸುಧಾ ಮೂರ್ತಿ ಹೆಸರಿಡಲಾಗಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 45 ವರ್ಷದ ಸುವರ್ಣ ಎಂಬ ಆನೆ, ಹೆಣ್ಣು ಮರಿಗೆ ಜನ್ಮ ನೀಡಿದೆ. ಈ ಆನೆ ಮರಿಯ ಜತೆಗೆ ಉದ್ಯಾನವನದಲ್ಲಿ ಆನೆಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಇದೀಗ ಈ ಆನೆ ಮರಿಗೆ ಸುಧಾ ಮೂರ್ತಿ ಅವರ ಹೆಸರಿಡಲಾಗಿದೆ.
![]()
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅಧಿಕಾರಿಗಳು ಮರಿ ಆನೆಗೆ ಹೆಸರು ಸೂಚಿಸುವಂತೆ ಆನ್ ಲೈನ್ ನಲ್ಲಿ ಮನವಿ ಮಾಡಿದ್ದರು. ಈ ವೇಳೆ ಸಾರ್ವಜನಿಕರು ಸುಧಾ ಮೂರ್ತಿ ಹೆಸರು ಸೂಚಿಸಿರುವ ಹಿನ್ನಲೆಯಲ್ಲಿ ಆನೆ ಮರಿಗೆ ಸುಧಾ ಎಂದು ನಾಮಕರಣ ಮಾಡಲಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.









