ಬಂಟ್ವಾಳ – ಭಾರಿ ಮಳೆಗೆ ಗುಡ್ಡ ಕುಸಿದು ಮೂವರು ಕಾರ್ಮಿಕರ ದುರ್ಮರಣ…
ಕಳೆದ ಕೆಲವು ದಿನಗಳಿಂದ ಕರಾವಳಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ನೇಲ್ಯಪಲ್ಕೆ ಪಕ್ಕದ ಮುಕ್ಕುಡ ಬಳಿ ಭೂ ಕುಸಿತ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಮನೆಯೊಂದರ ಮೇಲೆ ಮಣ್ಣು ಕುಸಿದ ಪರಿಣಾಮ ಕೇರಳ ಮೂಲದ ಮೂವರು ಕಾರ್ಮಿರು ಮೃತಪಟ್ಟಿದ್ದಾರೆ. ಗುಡ್ಡ ಕುಸಿದು ಸ್ಥಳೀಯ ನಿವಾಸಿ ಹೆನ್ರಿ ಕಾರ್ಲೋ ಎಂಬುವವರ ಮನೆ ಮೇಲೆ ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಒಟ್ಟು ಐದು ದಿನಗೂಲಿ ಕಾರ್ಮಿಕರು ಶೆಡ್‌ನಲ್ಲಿ ವಾಸಿಸುತ್ತಿದ್ದರು. ರಾತ್ರಿ ಸುಮಾರು 8.45ರ ವೇಳೆಗೆ ಈ ಘಟನೆ ಸಂಭವಿಸಿದ್ದು, ಒಬ್ಬ ವ್ಯಕ್ತಿ ಅವಘಡದಿಂದ ಪಾರಾಗಿದ್ದಾರೆ.
ಮೃತ ಕಾರ್ಮಿಕರನ್ನು ಬಿಜು ಪಾಲಕ್ಕಾಡ್, (45), ಬಾಬು ಕೊಟ್ಟಾಯಂ, (46) ಮತ್ತು ಸಂತೋಷ್ ಅಲಪುಝಾ, (46) ಎಂದು ಗುರುತಿಸಲಾಗಿದೆ. ಜಾನಿ ಕಣ್ಣೂರು ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರ ಸಹಾಯದಿಂದ ಕಾರ್ಯಾಚರಣೆ ನಡೆದಿದ್ದು, ಮಣ್ಣಿನಡಿ ಸಿಲುಕಿಕೊಂಡಿದ್ದಕಾರ್ಮಿಕರನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ. Bantwala – Three laborers died after the hill collapsed due to heavy rain.