ರಾಹುಲ್, ಶಿಕ್ಷಕನನ್ನು ಮೆಚ್ಚಿಸಲು ಉತ್ಸುಕನಾಗಿರುವ ವಿದ್ಯಾರ್ಥಿಯಂತೆ : ಒಬಾಮಾ
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿರುವ ವಿಷಯ ಒಂದು ಟ್ವಿಟ್ಟರ್ ನಲ್ಲಿ ತುಂಬಾ ಟ್ರೆಂಟ್ ಆಗುತ್ತಿದೆ.
ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ‘ಎ ಪ್ರಾಮಿಸ್ಡ್ ಲ್ಯಾಂಡ್’ ಎಂಬ ಪುಸ್ತಕ ಬರೆದಿದ್ದು, ಇದರಲ್ಲಿ ವಿಶ್ವದ ಹಲವು ರಾಜಕೀಯ ನಾಯಕರ ಬಗ್ಗೆ ಮತ್ತು ಹಲವು ವಿಷಯಗಳನ್ನು ದಾಖಲಿಸಿದ್ದಾರೆ.
ಅದರಂತೆ ರಾಹುಲ್ ಗಾಂಧಿ ಬಗ್ಗೆ ಅವರು ಹೇಳಿರುವ ವಿಷಯ ಇದೀಗ ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗುತ್ತಿದೆ.
ಒಬಾಮಾ ತಮ್ಮ ಪುಸ್ತಕದಲ್ಲಿ ” ರಾಹುಲ್ ಗಾಂಧಿಯವರಲ್ಲಿ ಬೆಳೆಯದಿರುವ ಅಜ್ಞಾತ ಗುಣವಿದೆ, ಅಧ್ಯಾಪಕರು ಕೊಟ್ಟ ಕೆಲಸವನ್ನು ಮಾಡಿ ಮುಗಿಸಿ ಅವರನ್ನು ಮೆಚ್ಚಿಸಲು ನೋಡುವ ವಿದ್ಯಾರ್ಥಿಯಂತಹ ಗುಣವಿದೆ.
ಸತತ 4ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ : ಯಾವಾಗ ಗೊತ್ತಾ..!
ಆದರೆ ವಿಷಯದಲ್ಲಿ ಪರಿಣತಿ ಹೊಂದಲು ಅವರಲ್ಲಿ ಮನೋಭಾವ ಮತ್ತು ಉತ್ಸಾಹ, ಆಸಕ್ತಿಯ ಕೊರತೆಯಿದೆ ಎಂದಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಅಮೆರಿಕದ ಪ್ರಸಿದ್ಧ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.
ಒಬಾಮಾ ತಮ್ಮ ಪುಸ್ತಕದಲ್ಲಿ ರಾಹುಲ್ ಗಾಂಧಿ ಅಲ್ಲದೆ ಸೋನಿಯಾ ಗಾಂಧಿ ಅವರ ಬಗ್ಗೆ ಕೂಡ ಉಲ್ಲೇಖಿಸಿದ್ದಾರೆ.
ನಿರ್ಭಯ ಸಮಗ್ರತೆಗೆ ಭಾರತದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಅಮೆರಿಕದ ಮಾಜಿ ರಕ್ಷಣಾ ಕಾರ್ಯದರ್ಶಿ ಬಾಬ್ ಗೇಟ್ಸ್ ನಂತಹ ಒಂದಿಬ್ಬರು ನಾಯಕರಷ್ಟೆ ಶ್ರಮಿಸಿದ್ದರು ಎಂದು ಬರಾಕ್ ಒಬಾಮಾ ಹೇಳಿದ್ದಾರೆ.
ಒಬಾಮಾರ 768 ಪುಟಗಳ ಪುಸ್ತಕ ನವೆಂಬರ್ 17ರಂದು ಮಾರುಕಟ್ಟೆಗೆ ಬರಲಿದೆ. ಇದರಲ್ಲಿ ಬರಾಕ್ ಒಬಾಮಾ ಅವರ ಬಾಲ್ಯಜೀವನ, ರಾಜಕೀಯ ಬದುಕು, 2008ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಗೆಲುವು ಹೀಗೆ ಅನೇಕ ಸಂಗತಿಗಳನ್ನು ನಮೂದಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel