ಬಾರಾಮುಲ್ಲಾ ಎನ್-ಕೌಂಟರ್ ವೇಳೆ ಗಾಯಗೊಂಡಿದ್ದ ಯೋಧ ಹುತಾತ್ಮ
ಶ್ರೀನಗರ, ಅಗಸ್ಟ್ 19: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಯೋಧ ಮಂಗಳವಾರ ಮೃತಪಟ್ಟಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಕ್ರೇರಿ ಪ್ರದೇಶದಲ್ಲಿ ಭದ್ರತಾ ಪಡೆಯ ಚೆಕ್ ಪಾಯಿಂಟ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಇಬ್ಬರು ಸಿಆರ್ಪಿಎಫ್ ಜವಾನರು ಮತ್ತು ಒಬ್ಬ ಪೊಲೀಸ್ ಹುತಾತ್ಮರಾಗಿದ್ದರು. ಎನ್ಕೌಂಟರ್ ಸಮಯದಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗುಂಡೇಟಿನಿಂದ ಗಾಯಗೊಂಡಿದ್ದರು.
ಲಷ್ಕರ್-ಎ-ತೈಬಾ (ಎಲ್ಇಟಿ) ಕಮಾಂಡರ್ ಸಜ್ಜಾದ್ ಅಲಿಯಾಸ್ ಹೈದರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದಿದ್ದವು. ಬಾರಾಮುಲ್ಲಾ ಎನ್ಕೌಂಟರ್ ಭದ್ರತಾ ಪಡೆಗಳಿಗೆ ಒಂದು ಮಹತ್ವ ದ ಕಾರ್ಯಾಚರಣೆಯಾಗಿತ್ತು.
ಭದ್ರತಾ ಪಡೆಯ ಚೆಕ್ ಪಾಯಿಂಟ್ ಮೇಲೆ ಹೊಂಚು ಹಾಕಿ ಭಯೋತ್ಪಾದಕರು ದಾಳಿ ನಡೆಸಿದಾಗ ಇಬ್ಬರು ಸಿಆರ್ಪಿಎಫ್ ಯೋಧರು ಮತ್ತು ಒಬ್ಬ ಪೋಲೀಸ್ ಅಧಿಕಾರಿ ಸೇರಿದಂತೆ ಮೂವರು ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು. ಭದ್ರತಾ ಪಡೆಗಳಿಂದ ಪ್ರತಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಮತ್ತು ಇಬ್ಬರು ಲಷ್ಕರ್ ಕಮಾಂಡರ್ ಸೇರಿದಂತೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು. ಆದಾಗ್ಯೂ, ಹೆಚ್ಚಿನ ಭಯೋತ್ಪಾದಕರು ನುಗ್ಗುತ್ತಿದ್ದಂತೆ ಗುಂಡಿನ ಚಕಮಕಿ ನಡೆಯಿತು. ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಜವಾನರು ಗಂಭೀರವಾಗಿ ಗಾಯಗೊಂಡಿದ್ದು ಅವರಲ್ಲಿ ಒಬ್ಬರು ಸೋಮವಾರ ಸಾವನ್ನಪ್ಪಿದ್ದರೆ, ಇನ್ನೊಬ್ಬ ಯೋಧ ಇಂದು ಗುಂಡಿನ ಗಾಯಗಳಿಂದ ಮೃತಪಟ್ಟಿದ್ದಾರೆ ಎಂದು ಮಿರ್ ಹೇಳಿದ್ದಾರೆ.
ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ದಿಲ್ಬಾಗ್ ಸಿಂಗ್, ಸಜ್ಜಾದ್ ಅಲಿಯಾಸ್ ಹೈದರ್ ಕೇಂದ್ರಾಡಳಿತ ಪ್ರದೇಶದ ಅಗ್ರ ಹತ್ತು ಭಯೋತ್ಪಾದಕರಲ್ಲಿ ಒಬ್ಬನಾಗಿದ್ದು, 2016ರಲ್ಲಿ ಎಲ್ಇಟಿ ಕಮಾಂಡರ್ ಭಯೋತ್ಪಾದಕ ಸಂಘಟನೆಯಲ್ಲಿ ಸೇರಿಕೊಂಡಿದ್ದ ಎಂದು ಹೇಳಿದ್ದಾರೆ. ಈ ವರ್ಷದ ಜುಲೈನಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ವಸೀಮ್ ಬ್ಯಾರಿ ಮತ್ತು ಅವರ ಇಬ್ಬರು ಕುಟುಂಬ ಸದಸ್ಯರ ಹತ್ಯೆಯಲ್ಲಿ ಕೂಡ ಈತ ಭಾಗಿಯಾಗಿದ್ದ ಅಷ್ಟೇ ಅಲ್ಲ ಇನ್ನೂ ಅನೇಕ ಕುಟುಂಬಗಳ ಹತ್ಯೆ ನಡೆಸುವ ಯೋಜನೆ ಹಾಕಿಕೊಂಡಿದ್ದ. ಇದೀಗ ಪೊಲೀಸರು, ಸಿಆರ್ಪಿಎಫ್ ಮತ್ತು ಸೈನ್ಯವು ನಡೆಸಿದ ಯಶಸ್ವಿ ಕಾರ್ಯಾಚರಣೆಯಿಂದ ಅವನ ಹತ್ಯೆಯಾಗಿದ್ದು ಅನೇಕ ಕುಟುಂಬಗಳು ನಿಟ್ಟುಸಿರು ಬಿಡುವಂತಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಪೊಲೀಸ್ ಅಧಿಕಾರಿ ದಿಲ್ಬಾಗ್ ಸಿಂಗ್ ಹೇಳಿದರು.