ಚಿಕ್ಕಮಗಳೂರು: ಬೆಳಿಗ್ಗೆ ಹೆರಿಗೆಯಾಗಿದ್ದ ಬಾಣಂತಿ ವೈದ್ಯರ ನಿರ್ಲಕ್ಷ್ಯಕ್ಕೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ (Chikkamagaluru) ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ರಂಜಿತಾ ಬಾಯಿ(21) ಸಾವನ್ನಪ್ಪಿದ ದುರ್ದೈವಿ ಮಹಿಳೆ ಎನ್ನಲಾಗಿದೆ. ಈ ಮಹಿಳೆ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಿಗ್ಗೆ ಅವರಿಗೆ ಹೆರಿಗೆಯಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ, ರಾತ್ರಿ ಸಂದರ್ಭದಲ್ಲಿ ಏಕಾಏಕಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.