ಬಳ್ಳಾರಿ: ಇತ್ತೀಚೆಗಷ್ಟೇ ಬಾಣಂತಿಯರು ಸಾವನ್ನಪ್ಪಿರುವ ಸುದ್ದಿ ದೊಡ್ಡ ಆತಂಕಕ್ಕೆ ಕಾರಣವಾಗಿತ್ತು. ಈಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್ (Caesarean) ಮಾಡಿಸಿಕೊಂಡ ನಂತರ ಮೂವರು ಬಾಣಂತಿಯರು (Pregnant) ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ನಂತರ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕೂಡ್ಲಿಗೆ ತಾಲೂಕಿನ ಹಾಲಸಾಗರ ಗ್ರಾಮದ ಮಹಾಲಕ್ಷ್ಮಿ (20) ಸಾವನ್ನಪ್ಪಿರುವ ಬಾಣಂತಿ. ಈ ಮಹಿಳೆಗೆ ಗಂಡು ಮಗು ಜನಿಸಿತ್ತು. ಆದರೆ, ಹೆರಿಗೆ ಆಗುತಿದ್ದಂತೆ ಮಹಿಳೆಯ ಆರೋಗ್ಯದಲ್ಲಿ ಏರುಪೇರಾಗಿದೆ.ಹೀಗಾಗಿ ಐಸಿಯುನಲ್ಲಿ ಇಟ್ಟು ಮೂರು ದಿನ ಚಿಕಿತ್ಸೆ ನೀಡಿದ್ದರು. ಆದರೆ, ಈಗ ಸಾವನ್ನಪ್ಪಿದ್ದು, ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.