ಬಾಗಲಕೋಟೆ: ವ್ಯಕ್ತಿಯೊಬ್ಬರ ಕುತ್ತಿಗೆಗೆ ತಂತಿ ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಜಿಲ್ಲೆಯ ಬೀಳಗಿ ಪಟ್ಟಣ ಹೊರವಲಯ ಬೀಳಗಿ – ಜಮಖಂಡಿ ರಸ್ತೆಯಲ್ಲಿಯೇ ಈ ಘಟನೆ ನಡೆದಿದೆ. ಬೀಳಗಿ ತಾಲೂಕಿನ ಡವಳೇಶ್ವರ ಡವಳೇಶ್ವರ ಗ್ರಾಮದ ಈರಪ್ಪ ಗರಸಂಗಿ (50) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಈ ಕುರಿತು ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.