ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಚಿಂತಾಮಣಿ (Chintamani) ನಗರದ ಟಿಪ್ಪು ಬಡಾವಣೆಯಲ್ಲಿ ನಡೆದಿದೆ. ನಡು ರಸ್ತೆಯಲ್ಲಿಯೇ ಜಾಬೀರ್ ಪಾಷ ಅಲಿಯಾಸ್ ನೇಪಾಳ್ (26) ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮುಕ್ತಿಯಾರ್ ಪಾಷಾ ಮತ್ತು ಜಾಬೀರ್ ಕೊಲೆ ಮಾಡಿರುವ ಆರೋಪಿಯಾಗಿದ್ದು, ಇಬ್ಬರ ಮಧ್ಯೆ ಯಾವುದೋ ಕಾರಣಕ್ಕೆ ವೈಯಕ್ತಿಕ ದ್ವೇಷ ಬೆಳೆದಿತ್ತು ಎನ್ನಲಾಗಿದೆ. ಹೀಗಾಗಿ ಮಧ್ಯರಾತ್ರಿ ನಡು ರಸ್ತೆಯಲ್ಲಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಕೊಲೆ ಮಾಡಿದ ನಂತರ ತಾನೇ ಪೊಲೀಸರಿಗೆ ಶರಣಾಗಿದ್ದಾನೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.