ಬಳ್ಳಾರಿ: ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಪತಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ನಡೆದಿದೆ. ಮೈಬುನಾ ಬಿ. (35) ಕೊಲೆಯಾದ ಮಹಿಳೆ ಎನ್ನಲಾಗಿದೆ.
ಡಯಾಲಿಸಿಸ್ ರೋಗಿಯಾಗಿದ್ದ ರಸೂಲ್ ಸಾಬ್, ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿಲ್ಲ ಎಂದು ಕೋಪಗೊಂಡು ಮಲಗಿದ್ದ ಮೈಬುನಾಳನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಆನಂತರ ಆರೋಪಿಯೇ ಪೊಲೀಸರಿಗೆ ಶರಣಾಗಿದ್ದಾನೆ.
ಪತ್ನಿ ಸರಿಯಾಗಿ ಆರೈಕೆ ಮಾಡುತ್ತಿರಲಿಲ್ಲ. ಹೀಗಾಗಿ ಮೊದಲು ಅವಳು ಸಾಯಬೇಕು ಎಂಬ ಕಾರಣಕ್ಕೆ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದಾನೆ. ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.