ನೆಲಮಂಗಲ: ಕುಡಿದ ಮತ್ತಿನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರ ಬಾಬಣ್ಣ ಲೇಔಟ್ನಲ್ಲಿ ನಡೆದಿದೆ. ಹೇಮಂತ್ ಸಾವನ್ನಪ್ಪಿದ ದುರ್ದೈವಿ. ಕಿರಣ್, ಅಕ್ಷಯ್ ಆರೋಪಿಗಳು ಎನ್ನಲಾಗಿದ್ದು, ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. ಕೂಡಲೇ ಹೇಮಂತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.