ಗಾಂಧೀನಗರ: ಗುಜರಾತ್ ರಾಜ್ಕೋಟ್ನ ಗೇಮಿಂಗ್ ಝೋನ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದರ ಪರಿಣಾಮ 20 ಜನ ಸಜೀವ ದಹನವಾಗಿರುವ ಘಟನೆ ನಡೆದಿದೆ.
ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಮುನ್ಸಿಪಲ್ ಕಾರ್ಪೊರೇಷನ್ ಹಾಗೂ ಆಡಳಿತಕ್ಕೆ ಸೂಚನೆ ನೀಡಲಾಗಿದೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಲು ಸೂಚನೆ ನೀಡಲಾಗಿದೆ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಹೇಳಿದ್ದಾರೆ.
ಬೆಂಕಿ ನಿಯಂತ್ರಣಕ್ಕೆ ತರಲಾಗಿದೆ. ನಾವು ಸಾಧ್ಯವಾದಷ್ಟು ಶವಗಳನ್ನು ಹೊರತೆಗೆಯಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಸುಮಾರು 20 ಶವಗಳನ್ನು ಹೊರತೆಗೆಯಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ರಾಜ್ಕೋಟ್ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಗೇಮಿಂಗ್ ವಲಯವು ಯುವರಾಜ್ ಸಿಂಗ್ ಸೋಲಂಕಿ ಎಂಬ ವ್ಯಕ್ತಿಗೆ ಸೇರಿದ್ದು ಎನ್ನಲಾಗಿದೆ. ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ಏನು ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.