ಮುಖ್ಯಮಂತ್ರಿ ಬಿಎಸ್ ವೈ ವಿರುದ್ಧ ಅಸಮಾಧಾನ : ಕಟೀಲ್ ಗೆ ಯತ್ನಾಳ್ ಪತ್ರ
ಬೆಂಗಳೂರು : ಮುಖಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ತಮ್ಮ ಆಕ್ರೋಶ ಹೊರ ಹಾಕುತ್ತಲೇ ಇರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಬಿಎಸ್ ವೈ ವಿರುದ್ಧ ಕಿಡಿಕಾರಿದ್ದಾರೆ.
ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಕುರಿತು ಪತ್ರ ಬರೆದು ಅಸಮಾಧಾನ ಹೊರಹಾಕಿದ್ದಾರೆ.
ಯತ್ನಾಳ್ ಪತ್ರದಲ್ಲಿ.. ಜನವರಿ 4 ಮತ್ತು 5 ರಂದು ವಿಭಾಗವಾರು ಶಾಸಕರ ಬದಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.
ಆದ್ರೆ ಈ ಹಿಂದೆ ವಿಭಾಗವಾರು ಶಾಸಕರ ಸಭೆ ಕರೆದಾಗ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿಯ ಕುರಿತು ಸಲ್ಲಿಸಿದ ಮನವಿಗೆ ಮುಖ್ಯಮಂತ್ರಿಗಳು ತಕ್ಷಣ ಗಣ ಬಿಡುಗಡೆ ಮಾಡಿ ಎಂದು ಸಹ ಬರೆದರೂ ಇನ್ನೂವರೆಗೂ ಹಣ ಬಿಡುಗಡೆಯಾಗಿರುವುದಿಲ್ಲ.
ವಿಭಾಗವಾರು ಸಭೆಗಳು ವಿಫಲವಾಗಿವೆ. ಇದರಿಂದ ಶಾಸಕರ ಮನಸ್ಸಿಗೆ ನೋವಾಗಿದೆ.
ಉದಾಹರಣೆಗೆ ನನ್ನ ಮತಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆಯಾಗಿಲ್ಲ. ಶಾಸಕರು ಸಿಎಂ ಭೇಟಿಗೆ ಹೋದರೂ ಮುಖ್ಯಮಂತ್ರಿಗಳು ಸಿಗುತ್ತಿಲ್ಲ. ಬಹುಷಃ ಸಿಎಂ ಅನಾರೋಗ್ಯದ ದೃಷ್ಠಿಯಿಂದ ಸಿಗುತ್ತಿಲ್ಲ ಎಂದು ಭಾವಿಸುತ್ತೇನೆ.
ಮತ್ತು ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ, ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಅಲ್ಲದೇ, ಹಲವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ವಿಚಾರದಲ್ಲಿಯೂ ಬಿಜೆಪಿ ಶಾಸಕರನ್ನು ಕಡೆಗಣನೆ ಮಾಡಲಾಗಿದೆ. ಇದರಿಂದ ಕಾರ್ಯಕರ್ತರಿಗೂ ನೋವಾಗಿದೆ.
ಆದ್ದರಿಂದ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ವಿಭಾಗವಾರು ಶಾಸಕರ ಸಭೆಯ ಬದಲಾಗಿ ಜನವರಿ 4 ಅಥವಾ 5 ರಂದು ಪೂರ್ತಿ ಬೆಳಿಗ್ಗೆಯಿಂದ ಸಂಜೆಯವರಿಗೂ ಇಡೀ ದಿನ ರಾಜ್ಯದ ಎಲ್ಲ ನಮ್ಮ ಪಕ್ಷದ ಶಾಸಕರ ” ಶಾಸಕಾಂಗ ಸಭೆ ಕರೆಯಬೇಕೆಂದು ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









