ಯತ್ನಾಳ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ : ಸಾ.ರಾ.ಗೋವಿಂದು
ಬೆಂಗಳೂರು : ಕನ್ನಡ ಪರ ಹೋರಾಟಗಾರನ್ನು ರೋಲ್ ಕಾಲ್ ಹೋರಾಟಗಾರರು ಎಂದು ಆರೋಪಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಯತ್ನಾಳ್ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಅದರಂತೆ ಬೆಂಗಳೂರಿನಲ್ಲೂ ಕನ್ನಡ ಪರ ಸಂಘಟನೆಗಳು ಪ್ರತಿಭಟಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಪ್ರತಿಭಟನೆ ವೇಳೆ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಯತ್ನಾಳ್ ವಿರುದ್ಧ ಹರಿಹಾಯ್ದಿದ್ದಾರೆ.
ಶಾಸಕ ಯತ್ನಾಳ್ ನಾಲಿಗೆ ಮೇಲೆ ಹಿಡಿತವಿಲ್ಲದೆ, ಮತಿ ಕಳೆದುಕೊಂಡು ಮಾತನಾಡುತ್ತಾರೆ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕಿದೆ ಎಂದು ಕಿಡಿಕಾರಿದ್ದಾರೆ.
ಶಾಸಕ ಯತ್ನಾಳ ವಿರುದ್ಧ ಕರವೇ ಕಾರ್ಯಕರ್ತರ ಪ್ರತಿಭಟನೆ
ಅಲ್ಲದೆ ಅಧಿಕಾರಕ್ಕಾಗಿ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಪಕ್ಷಾಂತರ ಮಾಡುವ ಯತ್ನಾಳ್ ಗೆ ಕನ್ನಡಕ್ಕಾಗಿ ಹೋರಾಟ ಮಾಡಿಕೊಂಡು ಬಂದಿರುವ ನಮ್ಮಂತಹವರ ವಿರುದ್ಧ ಮಾತನಾಡುವ ಯಾವುದೇ ನೈತಿಕತೆ ಹೊಂದಿಲ್ಲ.
ಜಾತ್ಯತೀತವಾದಿ ಎಂದು ಒಂದು ಪಕ್ಷ ಸೇರುವ, ಕೋಮುವಾದಿ ಎಂದು ಮತ್ತೊಂದು ಪಕ್ಷದಲ್ಲಿ ಹೇಳಿಕೊಳ್ಳುವ ಇವರಿಂದ ನಾವು ಪಾಠ ಕಲಿಯಬೇಕೇ ಎಂದು ಗೋವಿಂದು ಪ್ರಶ್ನಿಸಿದ್ದಾರೆ.
ಹಾಗೇ ನಾಲಿಗೆ ಮೇಲೆ ನಿಯಂತ್ರಣವಿಲ್ಲದೆ ಮುಖ್ಯಮಂತ್ರಿ ವಿರುದ್ಧವೂ ಮಾತನಾಡುವ ಇವರನ್ನು ಹುಚ್ಚಾ ಸ್ಪತ್ರೆಗೆ ಸೇರಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ರಾಜ್ಯದಲ್ಲಿ ಏನಾದರೂ ಕನ್ನಡ ಉಳಿದಿದೆ ಎಂದರೆ ಅದು ಹೋರಾಟಗಾರರಿಂದ ಮಾತ್ರ. ರಾಜಕಾರಣಿಗಳು ಕನ್ನಡ ಹಿತಾಸಕ್ತಿಯನ್ನು ಬಲಿ ಕೊಡುವ ಸಂದರ್ಭದಲ್ಲಿ ಅದರ ವಿರುದ್ಧ ದನಿ ಎತ್ತಿ ತಮ್ಮ ಕುಟುಂಬ ಸೇರಿದಂತೆ ಎಲ್ಲವನ್ನೂ ಕಡೆಗಣಿಸಿ ಬೀದಿಗಿಳಿದು ಹೋರಾಟ ಮಾಡಿ ಜೈಲು, ಬೇಲು ಎಂದು ಪರಿತಪಿಸುತ್ತಿರುವವರು ಕನ್ನಡಪರ ಹೋರಾಟಗಾರರು. ಇವರ ನೋವು ಯತ್ನಾಳ್ ಅಂತಹವರಿಗೇನು ಗೊತ್ತು? ಎಂದು ಸಾ ರಾ ಗೋವಿಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










