ಮಿನಿ ಸಮರ : ಮಸ್ಕಿ ಕುಸ್ತಿಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಜಯ
ಮಸ್ಕಿ : ಭಾರಿ ಪೈಪೋಟಿಯಿಂದ ಕೂಡಿದ್ದ ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಬಸನಗೌಡ ತುರ್ವಿಹಾಳ ಅವರಿಗೆ ಪ್ರಚಂಡ ಜಯ ಸಿಕ್ಕಿದೆ.
ಬಿಜೆಪಿಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ವಿರುದ್ಧ ತುರ್ವಿಹಾಳ ಅವರಿಗೆ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಿಕ್ಕಿದೆ.
ಮತ ಎಣಿಕೆ ಆರಂಭವಾದಾಗಿನಿಂದಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿಕೊಂಡು ಬಂದಿತ್ತು. ಇದೀಗ 25 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಜಯ ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಚುನಾವಣಾ ಮತ ಎಣಿಕೆಯ ಹಲವು ಸುತ್ತುಗಳು ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ಒಪ್ಪಿಕೊಂಡಿದ್ದರು. ಅದರಂತೆ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ನಗೆಯನ್ನು ಬೀರಿದ್ದಾರೆ.